‘ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ, ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಾನು ನಿರ್ಮಾಣ ಮಾತ್ರ ಮಾಡಿದ್ದೇನೆ. ‘ಡಾರ್ಕ್ ನೆಟ್’ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಕನ್ನಡದಲ್ಲಿ ‘ಗುಲ್ಟು’ ಚಿತ್ರದ ನಂತರ ಈ ಜಾನರ್‌ನ ಚಿತ್ರ ಬಂದಿರಲಿಲ್ಲ. ಆಗಸ್ಟ್ 23 ಚಿತ್ರ ತೆರೆಗೆ ಬರಲಿದೆ’ ಎಂದರು ದಯಾಳ್ ಪದ್ಮನಾಭನ್.