ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಮೆಜೆಸ್ಟಿಕ್’ನಲ್ಲಿ ಶ್ರುತಿ

Published 28 ಜೂನ್ 2024, 0:29 IST
Last Updated 28 ಜೂನ್ 2024, 0:29 IST
ಅಕ್ಷರ ಗಾತ್ರ

ಬೆಂಗಳೂರಿನ ಹೃದಯವಾಗಿರುವ ಮೆಜೆಸ್ಟಿಕ್‌ನಲ್ಲಿ ನಡೆಯುವ ಘಟನೆಗಳನ್ನು ಕಥೆಯಾಗಿ ಹೊಂದಿರುವ ‘ಮೆಜೆಸ್ಟಿಕ್ 2’ ಸೆಟ್ಟೇರಿದ್ದು ಗೊತ್ತೇ ಇದೆ. ಇದೀಗ ಹಿರಿಯ ನಟಿ ಶ್ರುತಿ ಆ ತಂಡ ಸೇರಿಕೊಂಡಿದ್ದಾರೆ. 

ದರ್ಶನ್‌ ಅಭಿನಯದ ‘ಮೆಜೆಸ್ಟಿಕ್‌’ ಚಿತ್ರಕ್ಕೆ ಕಥೆ ಬರೆದಿದ್ದ ನಿರ್ದೇಶಕ ರಾಮು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ನಾಯಕನಾಗುತ್ತಿದ್ದಾರೆ. ಅಮ್ಮಾ ಎಂಟರ್‌ಪ್ರೈಸಸ್ ಮೂಲಕ ಚಿತ್ರದುರ್ಗದ ಟಿ.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿತು.

‘ಚಿತ್ರದಲ್ಲಿ ತಾಯಿ ಪಾತ್ರದಲ್ಲಿ ಶ್ರುತಿ ಕಾಣಿಸಿಕೊಂಡಿದ್ದಾರೆ. ಅವರನ್ನು ಖಳನಾಯಕರ ಗುಂಪು ಅಪಹರಣ ಮಾಡುತ್ತದೆ. ನಾಯಕ  ಹಾಗೂ ಆತನ ಸ್ನೇಹಿತ ಶ್ರುತಿಯನ್ನು ಹುಡುಕಿಕೊಂಡು ಬರುವ ಕ್ಲೈಮ್ಯಾಕ್ಸ್‌ ಚಿತ್ರೀಕರಣ ಪೂರ್ಣಗೊಂಡಿದೆ’ ಎನ್ನುತ್ತಾರೆ ನಿರ್ದೇಶಕರು.

ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಕಾಣಿಸಿಕೊಂಡಿದ್ದಾರೆ. ವಿನು ಮನಸು ಸಂಗೀತ ನಿರ್ದೇಶನವಿದ್ದು, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT