ನಟ ಶರಣ್ ಅಭಿನಯದ ‘ರಾಜ್ವಿಷ್ಣು’ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದ ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ಇದೀಗ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್ ಮಾಹಿತಿ ನೀಡಿದ್ದಾರೆ. ಈ ಆ್ಯಕ್ಷನ್ ಕಮರ್ಷಿಯಲ್ ಸಿನಿಮಾದ ಚಿತ್ರೀಕರಣ ಕಳೆದ ಆಗಸ್ಟ್ನಲ್ಲಿ ಪ್ರಾರಂಭವಾಗಿತ್ತು. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ‘ಮಾರ್ಟಿನ್’ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ತೆರೆ ಕಾಣಲಿದೆ.

ಅರ್ಜುನ್ ನಿರ್ದೇಶನದ ‘ಅದ್ದೂರಿ’ ಮುಖಾಂತರ ಧ್ರುವ 2012ರಲ್ಲಿ ಚಂದನವನಕ್ಕೆ ಪ್ರವೇಶಿಸಿದ್ದರು. ‘ಮಾರ್ಟಿನ್’ ಸಿನಿಮಾ ಮುಖಾಂತರ ಈ ಜೋಡಿ ಮತ್ತೆ ಒಂದಾಗಿದೆ. ‘ಬಹದ್ಧೂರ್’, ‘ಭರ್ಜರಿ’, ‘ಪೊಗರು’ ಚಿತ್ರದ ಬಳಿಕ ಧ್ರುವ ಅವರ ಮುಂದಿನ ಪ್ರೊಜೆಕ್ಟ್ ಇದಾಗಿದೆ. ಪ್ರಸ್ತುತ ತಮಿಳು, ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಅವಕಾಶಗಳನ್ನು ಪಡೆಯುತ್ತಿರುವ ವೈಭವಿ ಮತ್ತೆ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.