‘ಪೆಪೆ ಸಿನಿಮಾ ಎರಡು ವರ್ಷದ ಪಯಣ. ಚಿತ್ರದಲ್ಲಿ ತುಂಬಾ ಸ್ಟ್ರಾಂಗ್ ಪಾತ್ರಗಳಿವೆ. ಸಿನಿಮಾ ನೋಡಿ ಹೊರ ಬರುವ ಪ್ರತಿಯೊಬ್ಬರು ಪಾತ್ರಗಳ ಬಗ್ಗೆ ಯೋಚನೆ ಮಾಡುತ್ತಾರೆ. ಆಗಸ್ಟ್ 30ರಂದು ಚಿತ್ರ ಬಿಡುಗಡೆಯಾಗಲಿದೆ’ ಎಂದು ವಿನಯ್ ಹೇಳಿದರು. ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಿನಿಮಾಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಅಭಿಷೇಕ್ ಕಾಸರಗೋಡು ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ರವಿವರ್ಮ, ಚೇತನ್ ಡಿಸೋಜ, ಡಿಫರೆಂಟ್ ಡ್ಯಾನಿ ಮತ್ತು ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ.