‘ಸೆಪ್ಟೆಂಬರ್’ನಲ್ಲಿಬಿಡುಗಡೆಗೂ ಪೂರ್ವದಲ್ಲೇ ಭರ್ಜರಿಯಾಗಿ ಮಾರಾಟವಾಗುತ್ತಿದೆ ಚಿತ್ರದ ಟಿಕೆಟ್

‘ರಾಜ ರಾಣಿ ರೋರರ್ ರಾಕೆಟ್’ ಚಿತ್ರದ ಮೂಲಕ ನೃತ್ಯ ನಿರ್ದೇಶಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ. ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಸೆಪ್ಟೆಂಬರ್ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ ಮಾಗಡಿ ನಿರ್ದೇಶಿಸಿದ್ದಾರೆ. ನಾಗರಾಜ್ ವಿ. ಅಜ್ಜಂಪುರ ನಿರ್ಮಾಣ ಮಾಡಿದ್ದಾರೆ. ಹುಲಿಯೂರು ದುರ್ಗದಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ.

‘ಮುಂದಿನ ತಿಂಗಳು ಚಿತ್ರ ತೆರೆಗೆ ಬರುತ್ತಿದ್ದು, ಚಿತ್ರತಂಡ ವಿನೂತನ ಪ್ರಚಾರಕ್ಕೆ ಮುಂದಾಗಿದೆ. ಇತ್ತೀಚೆಗೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಚಿತ್ರದ ಪಾಸ್(ಟಿಕೆಟ್)ಗಳನ್ನು ಈಗಲೇ ನೃತ್ಯಗಾರರಿಗೆ ವಿತರಿಸಲಾಗುತ್ತಿದೆ’ ಎಂದರು ನಾಯಕ ಭೂಷಣ್.

ಇತ್ತೀಚೆಗೆ ಸಂಜಿತ್ ಹೆಗಡೆ ಹಾಡಿರುವ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಒಂದು ಮಿಲಿಯನ್ಗೂ ಅಧಿಕ ವೀಕ್ಷಣೆಯಾಗಿದೆ. ಪ್ರಭು ಎಸ್.ಆರ್. ಸಂಗೀತ ನೀಡಿದ್ದಾರೆ.

ಭೂಷಣ್ ಅವರಿಗೆ ನಾಯಕಿಯಾಗಿ ಮಾನ್ಯಾ ಅಭಿನಯಿಸಿದ್ದಾರೆ. ರಣಧೀರ್, ಸಂತೋಷ್ ತಾರಾಬಳಗದಲ್ಲಿದ್ದಾರೆ. ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.