ನಟ ಡಾ.ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ ‘ಶಿವ 143’ ಚಿತ್ರ ಆಗಸ್ಟ್ 26ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ನೋಡುಗರ ಮನ ಗೆದ್ದಿದೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

‘ಇದು ಲಾಕ್ ಡೌನ್ ಪೂರ್ವದಲ್ಲೇ ತಯಾರಾದ ಸಿನಿಮಾ. ಕೊರೊನಾ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಆನಂತರ ದೊಡ್ಡ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಿದ್ದವಾಗಿದ್ದವು. ನಾವು ಸೂಕ್ತ ಸಮಯ ನೋಡಿ, ಇದೇ ಆಗಸ್ಟ್ 26 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದು ರೌಡಿಸಂ ಸಿನಿಮಾ ಅಲ್ಲ. ವಿಭಿನ್ನ ಪ್ರೇಮಕಥೆಯ ಚಿತ್ರ. ಜಯಣ್ಣ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ಹಾಗೂ ಧೀರನ್ ಅವರ ಕುಟುಂಬದವರು ಕುಳಿತು, ಧೀರನ್ ಅವರಿಗೆ ಇಂತಹುದೇ ಕಥೆ ಇದ್ದರೆ ಚೆನ್ನ ಎಂದು ತಿರ್ಮಾನಿಸಿದ್ದರು. ನಾನು ಆನಂತರ ತಂಡ ಸೇರಿಕೊಂಡೆ. ಧೀರನ್ ಅವರಿಗೆ ಈ ಮಾಸ್ ಲುಕ್ ಸರಿ ಹೊಂದುವುದೊ, ಇಲ್ಲವೋ? ಎಂಬ ಯೋಚನೆಯಿತ್ತು. ಅವರ ನಟನೆ ನೋಡಿ ಅದು ದೂರವಾಯಿತು. ನಾಯಕಿ ಮಾನ್ವಿತಾ ಕಾಮತ್ ಹಾಗೂ ಚರಣ್ ರಾಜ್ ಅವರ ಅಭಿನಯ ಕೂಡ ತುಂಬಾ ಚೆನ್ನಾಗಿದೆ. ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಕಾಮಿಡಿ ಮೋಡಿ ಮಾಡಲಿದೆ’ ಎಂದು ನಿರ್ದೇಶಕ ಅನಿಲ್ ಕುಮಾರ್ ಚಿತ್ರದ ಬಗ್ಗೆ ವಿವರಣೆ ನೀಡಿದರು.

‘ನನಗೂ ಈ ಕಥೆ ಇಷ್ಟವಾಗಿತ್ತು. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಮೈಸೂರಿನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲೇ ಅಪ್ಪು ಮಾಮ ‘ಜೇಮ್ಸ್’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಾಹಸ ನಿರ್ದೇಶಕ ರವಿವರ್ಮ ಅವರು ಎರಡೂ ಚಿತ್ರಗಳಿಗೂ ಸಾಹಸ ಸಂಯೋಜನೆ ಮಾಡುತ್ತಿದ್ದರು. ನಾನು ಪಾಲ್ಗೊಂಡ ಸಾಹಸ ದೃಶ್ಯವೊಂದರ ತುಣುಕನ್ನು ಅವರು, ಅಪ್ಪು ಮಾಮ ಅವರಿಗೆ ತೋರಿಸಿದರಂತೆ. ಅದನ್ನು ನೋಡಿದ ಅಪ್ಪು ಮಾಮ, ಸ್ನೇಹಿತರೊಬ್ಬರ ಬಳಿ ಅವನ ಕಣ್ಣು ನೋಡಿ ಎಷ್ಟು ಚೆನ್ನಾಗಿದೆ. ನಮ್ಮ ಕುಟುಂಬದಿಂದ ಒಳ್ಳೆಯ ಹೀರೋ ಬರುತ್ತಿದ್ದಾನೆ ಎಂದು ತುಂಬಾ ಸಂತೋಷಪಟ್ಟಿದ್ದರಂತೆ. ಈ ವಿಷಯವನ್ನು ನನಗೆ ಎಷ್ಟೋ ದಿನಗಳ ಬಳಿಕ ಆ ಸ್ನೇಹಿತರು ಹೇಳಿದರು’ ಎಂದರು ನಾಯಕ ಧೀರನ್.

ಜಯಣ್ಣ, ಭೋಗೇಂದ್ರ ಹಾಗೂ ಡಾ.ಸೂರಿ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.