ರಿಷಬ್ ಶೆಟ್ಟಿ ನಟನೆಯ ‘ಬೆಲ್ ಬಾಟಂ’ ಸಿನಿಮಾ ನಿರ್ಮಾಣ ಮಾಡಿದ್ದ ಸಂತೋಷ್ ಕುಮಾರ್ ಕೆ.ಸಿ ನಿರ್ಮಾಣದ ಹೊಸ ಸಿನಿಮಾ ‘ಹುಬ್ಬಳ್ಳಿ ಹಂಟರ್ಸ್’ನ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

ಗೋಲ್ಡನ್ ಹಾರ್ಸ್ ಸಿನಿಮಾ ಬ್ಯಾನರ್ನಡಿ ಈ ಚಿತ್ರಕ್ಕೆ ಸಂತೋಷ್ ಅವರು ಬಂಡವಾಳ ಹೂಡಿದ್ದು, ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ‘ಹುಬ್ಬಳ್ಳಿ ಹಂಟರ್ಸ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮುಹೂರ್ತ ನೆರವೇರಿಸಿದ್ದ ಚಿತ್ರತಂಡ 14 ದಿನ ಶೂಟಿಂಗ್ ಮಾಡಿದೆ. ಮಾರ್ಚ್ ತಿಂಗಳಲ್ಲಿ ಎರಡನೇ ಹಂತದ ಶೂಟಿಂಗ್ ಆರಂಭಿಸಲು ಯೋಜನೆ ಹಾಕಿಕೊಂಡಿದೆ.

ಚಿತ್ರದಲ್ಲಿ ಪ್ರಮೋದ್ ಶೆಟ್ಟಿ, ‘ಮಹಾನಟಿ’ ಖ್ಯಾತಿಯ ಧನ್ಯಶ್ರೀ ಸುಜಿತ್ ಮುಖ್ಯಭೂಮಿಕೆಯಲ್ಲಿದ್ದು, ಭಾರತದಾದ್ಯಂತ ಇರುವ ಖ್ಯಾತ ಕಂಟೆಂಟ್ ಕ್ರಿಯೇಟರ್ಸ್ ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ. ಶೀರ್ಷಿಕೆಯೇ ಹೇಳುವಂತೆ ಇದು ಉತ್ತರ ಕರ್ನಾಟಕ ಸೊಗಡಿನ ಕಥೆ. ಸಮರ್ಥ್ ಅವರು ಕಥೆ ಬರೆದು ರಾಹುಲ್ ವಿ.ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸಂಭಾಷಣೆ ಜವಾಬ್ದಾರಿ ನಿಭಾಯಿಸಿದ್ದಾರೆ. ಅಭಿಮನ್ಯು ಸದಾನಂದನ್ ಛಾಯಾಚಿತ್ರಗ್ರಹಣ, ಪ್ರಸನ್ನ ಕೇಶವ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.