ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗತಿಹಳ್ಳಿ ಸೇರಿ ಹಲವರಿಗೆ ಪ್ರಶಸ್ತಿ

Published 30 ಜನವರಿ 2024, 23:30 IST
Last Updated 30 ಜನವರಿ 2024, 23:30 IST
ಅಕ್ಷರ ಗಾತ್ರ

ನಟ ಡಾಲಿ ಧನಂಜಯ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ, ಹೇಮಂತ್‌ ರಾವ್‌ ಸೇರಿದಂತೆ ಚಿತ್ರರಂಗದ ಹಲವು ಸಾಧಕರಿಗೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕನ್ನಡ ಚಿತ್ರರಂಗದ ಪ್ರಚಾರಕರ್ತ ದಿವಂಗತ ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48ನೇ ವಾರ್ಷಿಕೋತ್ಸವ ಹಾಗೂ 23ನೇ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಇತ್ತೀಚಿಗೆ ನಡೆಯಿತು.

ನಿರ್ಮಾಪಕ ರಾಮು ಅವರಿಗೆ ಮರೋಣತ್ತರ ಪ್ರಶಸ್ತಿ ನೀಡಲಾಗಿದ್ದು, ಅವರ ಪತ್ನಿ ಮಾಲಾಶ್ರೀ ಪ್ರಶಸ್ತಿ ಸ್ವೀಕರಿಸಿದರು. ಹಿರಿಯ ನಟ ಸುಂದರರಾಜ್, ಹಿರಿಯ ನಟಿ ದುಬೈ ಜಯಲಕ್ಷ್ಮಿ, ಸಂಗೀತ ನಿರ್ದೇಶಕ ಜೋಕೋಸ್ಟ, ನಿರ್ದೇಶಕಿ ಸಿಂಧೂ ಶ್ರೀನಿವಾಸಮೂರ್ತಿ, ಹಿರಿಯ ಪತ್ರಕರ್ತ ಬಿ.ಎನ್‍. ಸುಬ್ರಹ್ಮಣ್ಯ, ಬಿ.ಎಸ್‌.ಲಿಂಗದೇವರು ಹಾಗೂ ಶರಣು ಹುಲ್ಲೂರು ಅವರು ವಿವಿಧ ವಿಭಾಗಗಳಲ್ಲಿನ ಪ್ರಶಸ್ತಿಗೆ ಭಾಜನರಾದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್.ಎಂ. ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT