2025ರಲ್ಲಿ ಕನ್ನಡದ ಸುಮಾರು 230ಕ್ಕೂ ಹೆಚ್ಚು ಸಿನಿಮಾಗಳು ತೆರೆಕಂಡಿವೆ. ಆದರೆ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿದ್ದು ಎರಡು ಸಿನಿಮಾಗಳು ಮಾತ್ರ. ವರ್ಷದ ಕೊನೆಯಲ್ಲಿ ತೆರೆಕಂಡ ಕನ್ನಡದ ಸ್ಟಾರ್ ನಟರ ಸಿನಿಮಾಗಳಿಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. 2026ರಲ್ಲಿ ಕನ್ನಡದಲ್ಲಿ ಅನೇಕ ತಾರಾ ನಟರ ಸಿನಿಮಾಗಳು ತೆರೆಕಾಣಲು ಸಜ್ಜಾಗಿವೆ.

ಲ್ಯಾಂಡ್ಲಾರ್ಡ್

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಜನವರಿ 23ಕ್ಕೆ ಬಿಡುಗಡೆಯಾಗಲಿದೆ. ‘ಕಾಟೇರ’ ಸಿನಿಮಾದ ಕಥೆಗಾರ ಜಡೇಶ ಕೆ. ಹಂಪಿ ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ಗೆ ನಾಯಕಿಯಾಗಿ ರಚಿತಾ ರಾಮ್ ಬಣ್ಣಹಚ್ಚಿದ್ದಾರೆ. ಸಾರಥಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಹಾಗೂ ಕೆ.ವಿ ಸತ್ಯಪ್ರಕಾಶ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ವಿಜಯ್ ಅವರ ಮಗಳಾದ ರಿತಿನ್ಯ ನಟಿಸಿದ್ದು, ಸ್ವತಂತ್ರ ಭೂಮಿಯ ಕಲ್ಪನೆ, ಶಿಕ್ಷಣ, ಕೂಲಿಗೆ ತಕ್ಕ ಕಾಸು ಎಂಬ ವಿಷಯಗಳ ಕುರಿತು ಚಿತ್ರ ಕಥಾಹಂದರವಿದೆ.

ಬಿಲ್ಲ ರಂಗ ಬಾಷಾ

ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳುತ್ತಿರುವ, ನಟ ಸುದೀಪ್ ನಟಿಸುತ್ತಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಬಿಲ್ಲ ರಂಗ ಬಾಷಾ’ 2026ರ ವರ್ಷಾಂತ್ಯದಲ್ಲಿ ತೆರೆಕಾಣುವ ಸಾಧ್ಯತೆ ಇದೆ. ವಿಕ್ರಾಂತ್ ರೋಣದಲ್ಲಿ ಸುದೀಪ್ ಮತ್ತು ಅನೂಪ್ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಬಿಲ್ಲ ರಂಗ ಬಾಷಾ ಮೂಲಕ ಮತ್ತೆ ಜತೆಯಾಗಿದ್ದಾರೆ. ಈ ಚಿತ್ರವನ್ನು ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.

ಟಾಕ್ಸಿಕ್

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆ ಕಾಣಲಿದೆ. ಕನ್ನಡ, ಇಂಗ್ಲಿಷ್ ಮಾತ್ರವಲ್ಲದೆ ಟಾಕ್ಸಿಕ್ ಸಿನಿಮಾವನ್ನು ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ಗೀತು ಮೋಹನ್ದಾಸ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಕೆಡಿ

ಜೋಗಿ ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಡಾಕ್ ದೇವನಾಗಿ ಸಂಜಯ್ ದತ್, ಅಣ್ಣಯ್ಯಪ್ಪನಾಗಿ ರವಿಚಂದ್ರನ್ ಕಾಣಿಸಿಕೊಂಡಿದ್ದರೆ ಧರ್ಮನ ಪಾತ್ರದಲ್ಲಿ ರಮೇಶ್ ಅರವಿಂದ್, ಮಹಾಲಕ್ಷ್ಮಿಯಾಗಿ ರೀಷ್ಮಾ ನಾಣಯ್ಯ ಹಾಗೂ ಸತ್ಯವತಿ ಪಾತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ.

ಡ್ಯಾಡ್

ಶಿವರಾಜ್ ಕುಮಾರ್ ಅಭಿನಯದ ಡ್ಯಾಡ್ ಚಿತ್ರದ ಇದೇ ವರ್ಷಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ. ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇನ್ನೂ ಘೋಷಣೆ ಮಾಡಿಲ್ಲ. ಡ್ಯಾಡ್ ಸಿನಿಮಾ ಕನ್ನಡ, ತೆಲುಗು ಹಾಗೂ ಮಲೆಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಶರ್ಮಿಳಾ ಮಾಂಡ್ರೆ, ಮಲಯಾಳಂ ನಟ ಸೂರಜ್ ವೆಂಜರಮೂಡು, ಬಾಬು ಸೇರಿದಂತೆ ಇನ್ನು ಹಲವು ಕಲಾವಿದರು ಈ ಚಿತ್ರದಲ್ಲಿದ್ದಾರೆ.

ದಿ ರೈಸ್ ಆಫ್ ಅಶೋಕ

ಸತೀಶ್ ನೀನಾಸಂ ಮತ್ತು ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಆದರೆ ಸಿನಿಮಾ ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡ ಸದ್ಯದಲ್ಲಿ ಮಾಹಿತಿ ನೀಡಲಿದೆ. ಈ ಚಿತ್ರವನ್ನು ಮನು ಶೆಡ್ಡಾರ್ ಅವರು ನಿರ್ದೇಶನ ಮಾಡುತ್ತಿದ್ದು, ಛಾಯಾಚಿತ್ರಗ್ರಹಣ ಲವಿತ್, ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಲವ್ ಮಾಕ್ಟೇಲ್ 3

ನಟ ಡಾರ್ಲಿಂಗ್ ಕೃಷ್ಣ ನಟನೆಯ ‘ಲವ್ ಮಾಕ್ಟೇಲ್ 3’ ಸಿನಿಮಾ ಏ.10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಶಶಾಂಕ್ ಬರೆದ ಹಾಡಿಗೆ ಸಂಗೀತ ನಿರ್ದೇಶಕ ನಕುಲ್ ಅಭ್ಯಂಕರ್ ದನಿಯಾಗಿದ್ದರು. ಈ ಸಿನಿಮಾದ ಆಡಿಯೊ ಹಕ್ಕುಗಳನ್ನು ಆನಂದ್ ಆಡಿಯೊ ಖರೀಸಿದಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಜೊತೆಗೂಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ರಕ್ಕಸಪುರದೋಳ್

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯವರು ನಾಯಕನಾಗಿ ನಟಿಸಿರುವ ‘ರಕ್ಕಸಪುರದೋಳ್’ ಸಿನಿಮಾ ಫೆ. 6ಕ್ಕೆ ಬಿಡುಗಡೆಯಾಗಲಿದೆ. ರವಿ ಸಾರಂಗ ಅವರ ನಿರ್ದೇಶನದ ಚೊಚ್ಚಲ ಸಿನಿಮಾ ‘ರಕ್ಕಸಪುರದೋಳ್’ನಲ್ಲಿ ರಾಜ್ ಶೆಟ್ಟಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಹಸ ನಿರ್ದೇಶಕ ರವಿವರ್ಮ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ‘ಗರುಡ ಗಮನ ವೃಷಭ ವಾಹನ’, ‘ಟೋಬಿ’ ಸಿನಿಮಾಗಳ ಬಳಿಕ ರಾಜ್ ಬಿ ಶೆಟ್ಟಿ ಅವರ ರಕ್ಕಸಪುರದೋಳ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

666 ಆಪರೇಷನ್ ಡ್ರೀಮ್ ಥಿಯೇಟರ್

ಹೇಮಂತ್ ಎಂ. ರಾವ್ ನಿರ್ದೇಶಿಸುತ್ತಿರುವ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ಇದೇ ವರ್ಷದಲ್ಲಿ ತೆರೆಗೆ ಬರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಬೇಕಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ 70-80ರ ದಶಕದ ರೆಟ್ರೋ ಸ್ಪೈಲ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಪ್ರಿಯಾಂಕಾ ಮೋಹನ್ ನಾಯಕಿಯಾಗಿ ಅಭಿನಯಿಸಿದ್ದಾರೆ ಮತ್ತು ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಅಯೋಗ್ಯ 2

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ ಅಯೋಗ್ಯ 2 ಸಿನಿಮಾ ಇದೇ ವರ್ಷದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಮಂಡ್ಯ ಸುತ್ತಮುತ್ತ ಸಿನಿಮಾ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಚಿತ್ರತಂಡ. ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರ ಬಿಳಬೇಕಿದೆ.

Your's Sincerely ರಾಮ್

ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಒಟ್ಟಾಗಿ ನಟಿಸುತ್ತಿರುವುದು ‘ Your’s sincerely ರಾಮ್’ ಇದೇ ವರ್ಷ ತೆರೆಗೆ ಬರಲು ಸಜ್ಜಾಗಿದೆ. ‘ಪುಷ್ಪಕ ವಿಮಾನ’, ‘ಇನ್ಸ್ಪೆಕ್ಟರ್ ವಿಕ್ರಮ್’ದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ. ಆರ್. ಈ ಚಿತ್ರದ ಮೂಲಕ ನಿರ್ದೇಶಿದ್ದಾರೆ. ದಿ ರಾಯಲ್ ಸ್ಟುಡಿಯೋಸ್ ಬ್ಯಾನರ್ ಅಡಿ ಸತ್ಯ ರಾಯಲ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜೆ. ಅನೂಪ್ ಸೀಳಿನ್ ಸಂಗೀತ, ನವೀನ್ ಕುಮಾರ್ ಛಾಯಾಚಿತ್ರಗ್ರಹಣ, ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ.

ಅಣ್ಣ ಫ್ರಂ ಮೆಕ್ಸಿಕೊ

ನಟ ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿರುವ ಮತ್ತು ನಿರ್ದೇಶಕ ಗುರು ಶಂಕರ್ ನಿರ್ದೇಶಿಸುತ್ತಿರುವ ಹೊಸ ಅಣ್ಣ ಫ್ರಂ ಮೆಕ್ಸಿಕೋ ಇದೇ ವರ್ಷದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದು ಕೌಟುಂಬಿಕ ಮನರಂಜನಾ ಸಿನಿಮಾ ಆಗಿದ್ದು, ಆಕ್ಷನ್ ಮತ್ತು ಹಾಸ್ಯದ ಅಂಶಗಳನ್ನು ಹೊಂದಿದೆ. ರೇಷ್ಮಾ ನಾಣಯ್ಯ, ಪೂರ್ಣಚಂದ್ರ ಮೈಸೂರು, ನಾಗಭೂಷಣ್, ರಂಗಾಯಣ ರಘು, ಉಮಾಶ್ರೀ ಹಲವು ಕಲಾವಿದರು ಈ ಚಿತ್ರದಲ್ಲಿದ್ದಾರೆ. ಶೀಘ್ರದಲ್ಲೇ ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಬೇಕಿದೆ.

ಭಾರ್ಗವ

ನಟ ಉಪೇಂದ್ರ ನಟಿಸುತ್ತಿರುವ, ನಾಗಣ್ಣ ನಿರ್ದೇಶಿಸುತ್ತಿರುವ ಭಾರ್ಗವ ಇದೇ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಅಂಕಿತಾ ಅಮರ್ ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಎಂ.ಬಿ. ಬಾಬು ಈ ಸಿನಿಮಾದ ನಿರ್ಮಾಪಕರು ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.