‘ಕಾಲಾಪತ್ಥರ್’ ಸೇರಿದಂತೆ ಮೂರು ಚಿತ್ರಗಳು ಈ ವಾರ (ಸೆ.13) ತೆರೆಯಲ್ಲಿವೆ.

ರಾನಿ:

ಕಿರುತೆರೆ ನಟ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿರುವ ‘ರಾನಿ’ ಚಿತ್ರ ಗುರುವಾರವೇ (ಸೆ.12) ತೆರೆ ಕಂಡಿದೆ. ಗುರುತೇಜ್ ಶೆಟ್ಟಿ ನಿರ್ದೇಶನವನ್ನು ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣ ಮಾಡಿದೆ.

‘ಇದೊಂದು ಕುಟುಂಬ ಸಮೇತ ನೋಡಬಹುದಾದ ಚಿತ್ರ. ಆ್ಯಕ್ಷನ್, ಸೆಂಟಿಮೆಂಟ್, ಥ್ರಿಲ್ಲರ್ ಎಲ್ಲದರ ಸಂಗಮವೇ ‘ರಾನಿ’. ಪ್ರೇಕ್ಷಕನಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ. 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ’ ಎಂದಿದ್ದಾರೆ ನಿರ್ದೇಶಕರು.

ರಾಘವೇಂದ್ರ ಬಿ ಕೋಲಾರ ಛಾಯಾಚಿತ್ರಗ್ರಹಣ ಹಾಗೂ ಮಣಿಕಾಂತ್ ಕದ್ರಿ ಸಂಗೀತವಿದೆ. ರಾಧ್ಯ ಹಾಗೂ ಸಮೀಕ್ಷ ಈ ಚಿತ್ರದ ನಾಯಕಿಯರು. ಯಶ್ ಶೆಟ್ಟಿ, ಕರಿಸುಬ್ಬು, ಧರ್ಮಣ್ಣ ಮುಂತಾದ ಕಲಾವಿದರು ಚಿತ್ರದಲ್ಲಿದ್ದಾರೆ.

ವಿಕಾಸ ಪರ್ವ:

ಕಿರುತೆರೆ ಮತ್ತು ಹಿರಿತೆರೆಯ ರೋಹಿತ್ ನಾಗೇಶ್ ನಾಯಕನಾಗಿ ನಟಿಸಿರುವ ಚಿತ್ರ ‘ವಿಕಾಸ ಪರ್ವ’. ವಿಶೃತ್ ನಾಯಕ್ ಕಥೆ, ಚಿತ್ರಕಥೆ ಬರೆದಿದ್ದು, ಅನ್ಬು ಅರಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸ್ವಾತಿ ಚಿತ್ರದ ನಾಯಕಿ.

‘ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಈ ಚಿತ್ರದಲ್ಲಿದ್ದು, ಸಮಾಜದ ಪ್ರತಿಯೊಂದು ಮನೆಯಲ್ಲೂ ಇರಬಹುದಾದ ಗಹನವಾದ ಸಮಸ್ಯೆಯೊಂದನ್ನು ನಮ್ಮ ಚಿತ್ರದಲ್ಲಿ ಹೇಳಿದ್ದೇವೆ. ಅದೇನೆಂದು ನೀವು ಚಿತ್ರಮಂದಿರದಲ್ಲೇ ನೋಡಬೇಕು. ಬೆಂಗಳೂರು, ಚಿಕ್ಕಮಗಳೂರು, ಸಕಲೇಶಪುರ, ಶನಿವಾರಸಂತೆ ಸುತ್ತಮುತ್ತ ಎರಡು ಹಂತಗಳಲ್ಲಿ ಚಿತ್ರದ ಶೂಟಿಂಗ್ ಮಾಡಿದ್ದೇವೆ’ ಎಂದಿದ್ದಾರೆ ರೋಹಿತ್ ನಾಗೇಶ್.

ಅಶ್ವಿನ್ ಹಾಸನ್, ಕುರಿರಂಗ, ಬಲ ರಾಜವಾಡಿ, ನಿಶ್ವಿಕಾಗೌಡ ತಾರಾಗಣದಲ್ಲಿದ್ದಾರೆ. ಎ.ಪಿ.ಓ. ಸಂಗೀತ ನಿರ್ದೇಶನದ ಮೂರು ಹಾಡುಗಳಿದ್ದು, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ. ನವೀನ್ ಸುವರ್ಣ ಛಾಯಾಚಿತ್ರಗ್ರಹಣ, ಶ್ರೀನಿವಾಸ ಕಲಾಲ್ ಅವರ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.