ಶನಿವಾರ, ಜನವರಿ 29, 2022
22 °C

‘ಮಾಫಿಯಾ’ದಲ್ಲಿ ಡೈನಾಮಿಕ್‌ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ಖಡಕ್‌ ಪೊಲೀಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ‘ಮಾಫಿಯಾ’ ಸಿನಿಮಾದಲ್ಲಿ ‘ಡಿ.ಸತ್ಯನಾರಾಯಣ’ ಎಂಬ ಪಾತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

‘ಮಮ್ಮಿ’ ಹಾಗೂ ‘ದೇವಕಿ’ ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಎಚ್‌. ನಿರ್ದೇಶನದಲ್ಲಿ ‘ಮಾಫಿಯಾ’ ಚಿತ್ರೀಕರಣ ನಡೆಯುತ್ತಿದೆ. ಇತ್ತೀಚೆಗೆ, ಎರಡು ವರ್ಷ ಬಿಟ್ಟಿದ್ದ ಕೂದಲನ್ನು ಚಿತ್ರಕ್ಕಾಗಿ ಕತ್ತರಿಸಿ ಅದನ್ನು ಪ್ರಜ್ವಲ್‌ ದೇವರಾಜ್‌ ಕ್ಯಾನ್ಸರ್‌ ರೋಗಿಗಳಿಗೆ ದಾನ ಮಾಡಿದ್ದರು. ಈ ಮೂಲಕ ಹೊಸ ಲುಕ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಪ್ರಜ್ವಲ್‌ ಅವರ 35ನೇ ಚಿತ್ರವಾಗಿದ್ದು, ಸಿನಿಮಾದಲ್ಲಿ ಖ್ಯಾತ ನಟ ದೇವರಾಜ್‌ ಅವರೂ ಪೊಲೀಸ್‌ ಅಧಿಕಾರಿಯಾಗಿ ನಟಿಸುತ್ತಿದ್ದಾರೆ. ಸಾಧುಕೋಕಿಲ ಅವರು ವಿಶೇಷ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ನಟಿ ಅದಿತಿ ಪ್ರಭುದೇವ ನಟಿಸುತ್ತಿದ್ದು, ತನಿಖಾ ಪತ್ರಕರ್ತೆಯ ಪಾತ್ರ ಅವರದ್ದು.

ಕಂಠೀರವ ಸ್ಟುಡಿಯೊದಲ್ಲಿ ಪೊಲೀಸ್‌ ಕಂಟ್ರೋಲ್‌ ರೂಂ ಸೆಟ್‌ ನಿರ್ಮಿಸಿ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಹೈದರಾಬಾದ್‌ನ ರಾಮೋಜಿ‌ ಫಿಲಂ ಸಿಟಿಯಲ್ಲೂ ಕೆಲ ದೃಶ್ಯಗಳನ್ನು ಶೂಟಿಂಗ್‌ ಮಾಡಲು ಚಿತ್ರತಂಡ ನಿರ್ಧರಿಸಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್‌ ಬಿ. ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು