ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಟ್ಟೇರಿದಳು ‘ಸುಮಾ’

Published 7 ಏಪ್ರಿಲ್ 2024, 23:30 IST
Last Updated 7 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಸುಮಾ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಈ ಹಿಂದೆ ‘ಸುಳಿ’ ಸೇರಿದಂತೆ ನಾಲ್ಕು ಚಿತ್ರಗಳನ್ನು ನಿರ್ದೇಶಿಸಿದ್ದ ರಶ್ಮಿ‌ ಎಸ್. ಈ ಚಿತ್ರಕ್ಕೆ ಕಥೆ ಬರೆದು, ಆ್ಯಕ್ಷನ್‌–ಕಟ್‌ ಹೇಳುತ್ತಿದ್ದಾರೆ. ಓಂ ಸಾಯಿ ಸಿನೆಮಾಸ್ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿದೆ.

‘ಸುಮಾ’ ಅಂದ್ರೆ ಸಂಪೂರ್ಣ ಮೊಗ್ಗು ಅಲ್ಲದ, ಪೂರ್ಣ ಅರಳಿಯೂ ಇರದಂತಹ ಹೂವು. ಈ ಸಿನಿಮಾದ ನಾಯಕಿಯ ಪಾತ್ರ ಕೂಡ ಹಾಗೇ ಇದೆ. ನಮ್ಮ ನಡುವೆಯೇ ಇರುವಂಥ ಹುಡುಗಿಯೊಬ್ಬಳ ಅಂತರಂಗದ ಕಥೆ ಈ ಸಿನಿಮಾದಲ್ಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ನಾಯಕಿ ಮತ್ತು ಸಿನಿಮಾದ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿದ್ದೇವೆ’ ಎಂದರು ನಿರ್ದೇಶಕಿ. 

ಮೈಸೂರು ಮೂಲದ ಪ್ರದೀಪ್ ಗೌಡ ಚಿತ್ರದ ನಾಯಕ. ಉಳಿದಂತೆ ಬಲ ರಾಜವಾಡಿ, ರೇಣು ಶಿಕಾರಿ, ಮುರಳೀಧರ್ ಡಿ.ಆರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಒಟ್ಟು 25 ದಿನಗಳ ಕಾಲ ಒಂದೇ ಹಂತದಲ್ಲಿ ಮಂಡ್ಯ, ಮದ್ದೂರು, ಆಲಭುಜನಹಳ್ಳಿ, ಕೆ. ಎಂ ದೊಡ್ಡಿ, ನಗರಕೆರೆ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಯಲಿದೆ.

ಶಂಖು, ನಟರಾಜ್ ಛಾಯಾಚಿತ್ರಗ್ರಹಣ, ಮುತ್ತುರಾಜ್ ಟಿ. ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಎನ್. ರಾಜು ಸಂಗೀತವಿದೆ. ಆಗಸ್ಟ್‌ ವೇಳೆಗೆ ‘ಸುಮಾ’ ಸಿನಿಮಾದ ಕೆಲಸಗಳನ್ನು ಪೂರ್ಣಗೊಳಿಸಿ, ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT