ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಷಿ ಹೊಸ ಸಿನಿಮಾ!

Published 21 ಮೇ 2024, 21:30 IST
Last Updated 21 ಮೇ 2024, 21:30 IST
ಅಕ್ಷರ ಗಾತ್ರ

ಇತ್ತೀಚೆಗಷ್ಟೇ ‘ರಾಮನ ಅವತಾರ’ವೆತ್ತಿದ ನಟ ರಿಷಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ‘ಸಂಜು ವೆಡ್ಸ್ ಗೀತಾ’ ಚಿತ್ರವನ್ನು ನಿರ್ಮಿಸಿದ್ದ ಪ್ರಮೋದ್ ನಾರಾಯಣ್ ಬಂಡವಾಳ ಹೂಡುತ್ತಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಕನ್ನಡಿಗ ಕಿಶೋರ್ ಭಾರ್ಗವ್ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. 

‘ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಆಗಸ್ಟ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಶೀಘ್ರದಲ್ಲಿ ಚಿತ್ರ ಶೀರ್ಷಿಕೆ ಬಿಡುಗಡೆ ಮಾಡುತ್ತೇವೆ’ ಎಂದಿದ್ದಾರೆ ನಿರ್ಮಾಪಕ ಪ್ರಮೋದ್.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ‘ಸೈತಾನ್’ ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ಚಿತ್ರದಲ್ಲಿರುತ್ತದೆ ಎನ್ನುತ್ತಿದೆ ಚಿತ್ರತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT