ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಯಾಳಂನತ್ತಲೂ ಎಸ್‌ಆರ್‌ಕೆ?

Published 31 ಜುಲೈ 2023, 23:46 IST
Last Updated 31 ಜುಲೈ 2023, 23:46 IST
ಅಕ್ಷರ ಗಾತ್ರ

ಇತ್ತೀಚೆಗೆ ಸೂಪರ್‌ಸ್ಟಾರ್‌ ಸಿನಿಮಾಗಳಲ್ಲಿ ಬಹುಭಾಷಾ ನಟರು ಅಭಿನಯಿಸುವ ಟ್ರೆಂಡ್‌ ಹೆಚ್ಚುತ್ತಿದೆ. ಪ್ಯಾನ್‌ ಇಂಡಿಯಾ ಪರಿಕಲ್ಪನೆಯ ಸಿನಿಮಾ, ದೊಡ್ಡ ಸ್ಟಾರ್‌ಗಳ ಸಿನಿಮಾವನ್ನು ಡಬ್‌ ಮಾಡಿ ಎಲ್ಲ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವುದು ಇದಕ್ಕೆ ಮುಖ್ಯ ಕಾರಣ. ಕನ್ನಡದಲ್ಲಿ ಸಾಲು, ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿರುವ ನಟ ಶಿವರಾಜ್‌ ಕುಮಾರ್‌, ತಮಿಳಿನಲ್ಲಿ ಕೂಡ ವಿಶೇಷ ಪಾತ್ರಗಳಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ.

ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾದಲ್ಲಿ ಶಿವರಾಜ್‌ ಕುಮಾರ್‌ ಸುಮಾರು 10 ನಿಮಿಷಗಳ ಕಾಲ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರಂತೆ. ಆಗಸ್ಟ್ 10ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆಗೊಂಡಿದೆ. ಆ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್‌ ಕುಮಾರ್‌, ತಮ್ಮ ಮುಂದಿನ ತಮಿಳು ಸಿನಿಮಾ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಧನುಷ್‌ ಅಭಿನಯದ ‘ಕ್ಯಾಪ್ಟನ್‌ ಮಿಲ್ಲರ್‌’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಹ್ಯಾಟ್ರಿಕ್‌ ಹೀರೋ ಕಾಣಿಸಿಕೊಂಡಿದ್ದಾರೆ. ಆ ಚಿತ್ರದ ಟೀಸರ್‌ ಕೂಡ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಜೈಲರ್’ಗಿಂತ ‘ಕ್ಯಾಪ್ಟನ್‌ ಮಿಲ್ಲರ್‌’ನಲ್ಲಿ ಪಾತ್ರದ ವ್ಯಾಪ್ತಿ ದೊಡ್ಡದಿದೆ ಎಂದು ಶಿವರಾಜ್‌ ಕುಮಾರ್‌ ಹೇಳಿದ್ದಾರೆ. ಮಲಯಾಳಂನ ಪೃಥ್ವಿರಾಜ್‌ ಸುಕುಮಾರ್ ಅವರಿಂದಲೂ ತಮಗೆ ಆಫರ್ ಬಂದಿದೆ ಎಂದೂ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT