ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಫೈರ್‌ ಫ್ಲೈ’ ಮೊದಲ ಹಂತದ ಚಿತ್ರೀಕರಣ ಪೂರ್ಣ

Published 26 ಸೆಪ್ಟೆಂಬರ್ 2023, 22:15 IST
Last Updated 26 ಸೆಪ್ಟೆಂಬರ್ 2023, 22:15 IST
ಅಕ್ಷರ ಗಾತ್ರ

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ‌ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸ್‌ನಡಿ ಈ ಸಿನಿಮಾ ಕಳೆದ ಜೂನ್‌ನಲ್ಲಿ ಸೆಟ್ಟೇರಿತ್ತು. 

ಮೂರು ವೆಬ್‌ ಸರಣಿಗಳನ್ನು ನಿರ್ಮಾಣ ಮಾಡಿದ್ದ ನಿವೇದಿತಾ ಅವರು ಈ ಸಿನಿಮಾ ನಿರ್ಮಾಣದ ಮುಖಾಂತರ ಸ್ಯಾಂಡಲ್‌ವುಡ್‌ಗೆ ಅಧಿಕೃತವಾಗಿ ಪ್ರವೇಶ ಮಾಡಿದ್ದರು. ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರು, ಬೆಂಗಳೂರಿನ ಸುತ್ತಮುತ್ತ ನಡೆದಿದೆ. ಅಕ್ಟೋಬರ್ ತಿಂಗಳ ಮೂರನೇ ವಾರದಿಂದ ದ್ವಿತೀಯ ಹಂತದ ಚಿತ್ರೀಕರಣ ಶುರುವಾಗಲಿದೆ ಎಂದಿದೆ ಚಿತ್ರತಂಡ. 

‘ಫೈರ್ ಫ್ಲೈ’ ಸಿನಿಮಾವನ್ನು ನಟ ವಂಶಿ ನಿರ್ದೇಶಿಸುತ್ತಿದ್ದು, ನಾಯಕರಾಗಿಯೂ ಕನ್ನಡಕ್ಕೆ ಪರಿಚಯಗೊಳ್ಳಲಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಲ್ಲಟ್ಟಿ ಛಾಯಾಚಿತ್ರಗ್ರಹಣವಿದ್ದು, ಚರಣ್ ರಾಜ್ ಸಂಗೀತ ನೀಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಂಶಿ ಈ ಹಿಂದೆ ಪಿಆರ್‌ಕೆ ನಿರ್ಮಾಣದ ‘ಮಾಯಾಬಜಾರ್‌’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಗುರು ದೇಶಪಾಂಡೆ ಅವರ ‘ಪೆಂಟಗನ್’ ಸಿನಿಮಾದಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಜಯ್ ರಾಮ್ ಈ ಚಿತ್ರಕ್ಕೆ ಸಹನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT