ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಪೌಡರ್‌’ ಬಿಡುಗಡೆ ಮುಂದೂಡಿಕೆ

Published 28 ಜೂನ್ 2024, 0:18 IST
Last Updated 28 ಜೂನ್ 2024, 0:18 IST
ಅಕ್ಷರ ಗಾತ್ರ

ಜನಾರ್ದನ್ ಚಿಕ್ಕಣ್ಣ ನಿರ್ದೇಶಿಸಿರುವ ದಿಗಂತ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಪೌಡರ್‌’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದೆ. ಜುಲೈ 12ರಂದು ತೆರೆಕಾಣಬೇಕಿದ್ದ ಸಿನಿಮಾ ಆಗಸ್ಟ್‌ 15ಕ್ಕೆ ಬಿಡುಗಡೆಯಾಗಲಿದೆ. 

ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದೆ. ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್‌’ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳೇ ಈ ಸಿನಿಮಾದ ಕಥೆ ಎಂದಿದೆ ಚಿತ್ರತಂಡ. ‘ಇದೊಂದು ಹಾಸ್ಯಭರಿತ ಸಿನಿಮಾವಾಗಿದ್ದು, ಅದರಲ್ಲಿ‌ ಗ್ರಾಫಿಕ್ಸ್‌ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಇವುಗಳನ್ನು ಅಚ್ಚುಕಟ್ಟಾಗಿ ಪ್ರೇಕ್ಷಕರ ಮುಂದಿಡಲು ಇನ್ನಷ್ಟು ಸಮಯದ ಅಗತ್ಯವಿದೆ. ಈ‌‌ ಕಾರಣ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ತಂಡದ ಜೊತೆ ಚರ್ಚಿಸಿ‌ ಸಂಸ್ಥೆಯು ಈ‌ ನಿರ್ಧಾರವನ್ನು ತೆಗೆದುಕೊಂಡಿದೆ’ ಎಂದು ಕೆ.ಆರ್‌.ಜಿ ತಿಳಿಸಿದೆ. ಕಾಮಿಡಿ ಜಾನರ್‌ನ ಈ ಸಿನಿಮಾದಲ್ಲಿ ದಿಗಂತ್‌ ನಾಯಕನಾಗಿ ನಟಿಸಿದ್ದು, ಶರ್ಮಿಳಾ ಮಾಂಡ್ರೆ, ಧನ್ಯಾ ರಾಮ್‌ಕುಮಾರ್‌ ಜೋಡಿಯಾಗಿದ್ದಾರೆ. ರಂಗಾಯಣ ರಘು, ನಾಗಭೂಷಣ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT