ಮುಂಬೈ: ಕಾಶ್ಮೀರ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸುತ್ತಿರುವ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ನಲ್ಲಿ ನಟಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಆರಂಭವಾಗಿದ್ದು, ಕಾಂತಾರ ಬೆಡಗಿ ಸೇರ್ಪಡೆ ಹೊಸ ಸುದ್ದಿಯಾಗಿದೆ.
‘ಈ ಪ್ರಾಜೆಕ್ಟ್ ಭಾಗವಾಗಲು ನನಗೆ ಅತ್ಯಂತ ಸಂತೋಷವಾಗಿದ್ದು, ಚಿತ್ರದಲ್ಲಿ ಕೆಲಸ ಮಾಡಲು ಉತ್ಸುಕಳಾಗಿದ್ದೇನೆ. ಈ ಅವಕಾಶ ನೀಡಿದ ವಿವೇಕ್ ಅಗ್ನಿಹೋತ್ರಿ ಸರ್ ನಿಮಗೆ ಧನ್ಯವಾದ’ಎಂದು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಟಿಗೆ ಹೃತ್ಪೂರ್ವಕ ಸ್ವಾಗತ ಕೋರಿರುವ ನಿರ್ದೇಶಕರು, ‘ಸ್ವಾಗತ ಸಪ್ತಮಿ, ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿನ ನಿಮ್ಮ ಪಾತ್ರ ಹಲವು ಹೃದಯಗಳನ್ನು ಮುಟ್ಟಲಿದೆ’ಎಂದು ಬರೆದುಕೊಂಡಿದ್ದಾರೆ.
‘ದಿ ವ್ಯಾಕ್ಸಿನ್ ವಾರ್’ಚಿತ್ರವು ಕೋವಿಡ್ ಲಸಿಕೆ ಕಂಡುಹಿಡಿಯಲು ಎರಡು ವರ್ಷಗಳ ಕಾಲ ಹಗಲು ರಾತ್ರಿ ದುಡಿದ ಭಾರತೀಯ ವಿಜ್ಞಾನಿಗಳು ಮತ್ತು ಸಿಬ್ಬಂದಿಯ ಕಥಾಹಂದರವನ್ನು ಒಳಗೊಂಡಿದೆ.
ವಿವೇಕ್ ಅಗ್ನಿಹೋತ್ರಿ ಅವರ ಪತ್ನಿ, ನಟಿ ಪಲ್ಲವಿ ಜೋಶಿ ಅವರ ‘ಐ ಆ್ಯಮ್ ಬುದ್ಧ ಪ್ರೊಡಕ್ಷನ್ಸ್ ಮತ್ತು ಅಭಿಷೇಕ್ ಅಗರ್‌ವಾಲ್ ಅವರ ‘ಅಭಿಷೇಕ್ ಅಗರ್‌ವಾಲ್ ಆರ್ಟ್ಸ್’ನಿಂದ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ. ಆಗಸ್ಟ್ 15,2023 ರಂದು ಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚಿತ್ರವನ್ನು ಥಿಯೇಟರ್‌ಗಳಿಗೆ ತರಲು ನಿರ್ಮಾಪಕರು ನಿರ್ಧರಿಸಿದ್ದಾರೆ. 11 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.