ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್(ಹಿಂದಿನ ಕಥೆ) ಅ.2ರಂದು ಬಿಡುಗಡೆಯಾಗಲಿದೆ. ರಿಷಬ್ ಜನ್ಮದಿನದಂದು (ಜುಲೈ 7) ಸಿನಿಮಾದ ಹೊಸ ಪೋಸ್ಟರ್ ರಿಲೀಸ್, ಇದರಲ್ಲಿ ಅವರ ಪಾತ್ರವನ್ನು ಪರಿಚಯಿಸಲಾಗಿದೆ. ಜೊತೆಗೆ ಹಲವು ಕಥೆಗಳನ್ನು ಇದು ಅಡಗಿಸಿಟ್ಟುಕೊಂಡಿದೆ.

2022ರಲ್ಲಿ ತೆರೆಕಂಡು ಹೊಸ ದಾಖಲೆ ಬರೆದಿದ್ದ ‘ಕಾಂತಾರ’ ಸಿನಿಮಾ ರಿಷಬ್ ಶೆಟ್ಟಿ ಸಿನಿಗ್ರಾಫ್ಗೆ ದೊಡ್ಡ ತಿರುವು ನೀಡಿತ್ತು. ಬಾಕ್ಸ್ ಆಫೀಸ್ನಲ್ಲೂ ದೊಡ್ಡ ಮೊತ್ತವನ್ನು ಬಾಚಿತ್ತು. ಆರಂಭದಲ್ಲಿ ಕನ್ನಡದಲ್ಲಷ್ಟೇ ತೆರೆಕಂಡು ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಿತ್ತು. ಇದೀಗ ‘ಕಾಂತಾರ’ ಪ್ರೀಕ್ವೆಲ್ ಶೂಟಿಂಗ್ ಪೂರ್ಣಗೊಂಡಿದ್ದು ಚಿತ್ರತಂಡ ಬಿಡುಗಡೆಗೆ ತಯಾರಿ ಆರಂಭಿಸಿದೆ. ‘ದಂತಕಥೆಯ ಮುನ್ನುಡಿ..ಆ ನುಡಿಗೊಂದು ಪರಿಚಯ...ಮನದಾಳದ ಕಥೆಗೆ ಮತ್ತೊಮ್ಮೆ ಸ್ವಾಗತ’ ಎಂಬ ಅಡಿಬರಹ ನೀಡಿ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ರಿಷಬ್ ಶೆಟ್ಟಿ ಹಿಂದೆಂದೂ ಕಾಣದ ಲುಕ್ನಲ್ಲಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಅಧ್ಯಾತ್ಮ ಮತ್ತು ಸಾಹಸಗಾಥೆಯ ಸಮ್ಮಿಶ್ರಣ ಎಂದು ಚಿತ್ರತಂಡ ಹೇಳಿದೆ.

ಕುಂದಾಪುರ ಬಳಿ 25 ಎಕರೆ ಪ್ರದೇಶದಲ್ಲಿ ಬೃಹತ್ ಸೆಟ್ ಹಾಕಿ ಈ ಸಿನಿಮಾದ ಕಾಲ್ಪನಿಕ ಊರನ್ನು ಸೃಷ್ಟಿಸಿ ಚಿತ್ರೀಕರಣ ನಡೆಸಲಾಗಿದೆ. ಭಾರತೀಯ ಹಾಗೂ ಅಂತರರಾಷ್ಟ್ರೀಯ ತಂತ್ರಜ್ಞರೂ ಈ ಸಿನಿಮಾಗೆ ಕೈ ಜೋಡಿಸಿದ್ದು, 45 ರಿಂದ 50 ದಿನಗಳ ಕಾಲ ಸುಮಾರು 500 ತರಬೇತಿದಾರರು, 3000ಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಈ ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದರು.

ಆಸ್ಕರ್ಗಾಗಿಯೇ ಕಾಂತಾರ

ಆಸ್ಕರ್ ಪ್ರಶಸ್ತಿಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ‘ಕಾಂತಾರ’ ಪ್ರೀಕ್ವೆಲ್ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರವನ್ನು ಆಸ್ಕರ್ ಸ್ಪರ್ಧೆಯ ಅಂಗಳಕ್ಕೆ ತಲುಪಿಸಲು ಈಗಿನಿಂದಲೇ ಪ್ರಯತ್ನ ನಡೆಸಿರುವುದಾಗಿ ಹೊಂಬಾಳೆ ಫಿಲ್ಮ್ಸ್ನ ಸಹ ಸಂಸ್ಥಾಪಕ ಚಲುವೇಗೌಡ ಅವರು ಇತ್ತೀಚೆಗೆ ತಿಳಿಸಿದ್ದರು.

‘ಕಾಂತಾರ ಚಾಪ್ಟರ್ 1’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಕುಂದಾಪುರದಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ತಮ್ಮ ಪಾತ್ರದ ಸಲುವಾಗಿ ರಿಷಬ್ ಶೆಟ್ಟಿ ಕಳರಿಪಯಟ್ಟು ತರಬೇತಿ ಪಡೆದಿದ್ದಾರೆ. ತೆಲುಗಿನ ಹಿಟ್ ಸಿನಿಮಾ ‘ಆರ್ಆರ್ಆರ್’ನ ಆ್ಯಕ್ಷನ್ ನಿರ್ದೇಶಕರಾಗಿದ್ದ ಟೊಡರ್ ಲ್ಯಾಜರೋವ್ ‘ಕಾಂತಾರ’ದ ಸಾಹಸ ದೃಶ್ಯಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.