ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಅಧ್ಯಾಯ 1' ಅಕ್ಟೋಬರ್ 2ರಂದು ಜಾಗತಿಕವಾಗಿ 7 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನಗೊಂಡಿತ್ತು. ಇದೀಗ ಕಾಂತಾರ ಅಧ್ಯಾಯ 1 ಬರೋಬ್ಬರಿ 50 ದಿನಗಳನ್ನು ಪೂರೈಸಿದೆ.

ಈ ವಿಚಾರವನ್ನು ನಟ ರಿಷಬ್ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಒಟಿಟಿಯಲ್ಲಿ ಬಿಡುಗಡೆಯಾದರೂ ಕೂಡ ಚಿತ್ರಮಂದಿರಗಳಲ್ಲಿ ಕಾಂತಾರ ಅಧ್ಯಾಯ 1 ಯಶಸ್ವಿಯಾಗಿ 50 ದಿನಗಳ ಕಾಲ ಪ್ರದರ್ಶನ ಕಂಡಿದೆ.
.ಸಪ್ತಮಿ ಗೌಡ ದುಬೈ ಡೈರೀಸ್: ಹತ್ತು ವರ್ಷದ ಕನಸು ನನಸು ಮಾಡಿಕೊಂಡ ಕಾಂತಾರ ಬೆಡಗಿ .ಈ ಗೆಲುವು ಕೇವಲ ನಮ್ಮದಲ್ಲ: ಕಾಂತಾರ ಚಾಪ್ಟರ್ 1 ತಂಡದಿಂದ ಸಂಭ್ರಮಾಚರಣೆ.
50 ದಿನಗಳನ್ನು ಪೂರೈಸಿದ ಖುಷಿಯಲ್ಲಿ ನಟ ರಿಷಬ್ ಶೆಟ್ಟಿ, ‘ನಮ್ಮ ಪರಂಪರೆ ಮತ್ತು ಪವಿತ್ರ ಸಂಪ್ರದಾಯಗಳಲ್ಲಿ ಬೇರೂರಿರುವ ದೈವಿಕ ಸಿನಿಮೀಯ ಅನುಭವ. ಪ್ರೀತಿ ಮತ್ತು ಬೆಂಬಲಕ್ಕಾಗಿ ಪ್ರಪಂಚದಾದ್ಯಂತ ಎಲ್ಲಾ ಪ್ರೇಕ್ಷಕರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿಮ್ಮ ಪ್ರೀತಿ ಈ ಪ್ರಯಾಣವನ್ನು ನಿಜವಾಗಿಯೂ ವಿಶೇಷವಾಗಿಸಿದೆ’ ಎಂದು ಬರೆದುಕೊಂಡಿದ್ದಾರೆ.

‘ಕಾಂತಾರ ಚಾಪ್ಟರ್ 1’ 2025ರಲ್ಲಿ ಅತೀ ಹೆಚ್ಚು ಹಣ ಗಳಿಸಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 'ಕಾಂತಾರ' ಚಿತ್ರವು ಕನ್ನಡ ನೆಲದ ಕಥೆ, ಸಂಸ್ಕೃತಿ ಮತ್ತು ನಂಬಿಕೆಯನ್ನು ವಿಶ್ವದಾದ್ಯಂತ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿದೆ. ಈ ಅಸಾಮಾನ್ಯ ಯಶಸ್ಸು ಕನ್ನಡ ಚಿತ್ರರಂಗಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸಿದೆ ಮತ್ತು ಪ್ರಾದೇಶಿಕ ಚಲನಚಿತ್ರಗಳ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.