ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿ
ರುವ ‘ಕಾಂತಾರ ಒಂದು ದಂತಕಥೆ ಅಧ್ಯಾಯ 1’ ಬಿಡುಗಡೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಕನಕವತಿಯನ್ನು ಪರಿಚಯಿಸಿದೆ.

ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಈ ದಿನದಂದು, ಚಿತ್ರತಂಡವು ಅವರ ಮೊದಲ ನೋಟವನ್ನು ಅನಾವರಣಗೊಳಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಇದೀಗ 'ಕನಕವತಿ'ಯ ಪಾತ್ರದ ಪರಿಚಯ, ಚಿತ್ರದ ಕುರಿತಾದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಹೊಂದಿರುವ ಈ ಸಿನಿಮಾಗಾಗಿ ಒಂದು ಹೊಸ ಲೋಕವನ್ನೇ ರಿಷಬ್ ಸೃಷ್ಟಿಸಿದ್ದಾರೆ.

ಛಾಯಾಚಿತ್ರಗ್ರಾಹಕ ಅರವಿಂದ್ ಕಶ್ಯಪ್, ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್, ಪ್ರೊಡಕ್ಷನ್ ಡಿಸೈನರ್ ವಿನೇಶ್ ಬಂಗ್ಲನ್ ಇಡೀ ಸಿನಿಮಾಗೆ ಅದ್ಭುತ ದೃಶ್ಯ ಮತ್ತು ಭಾವನಾತ್ಮಕ ಸ್ಪರ್ಶ ನೀಡಿದ್ದಾರೆ.

3000ಕ್ಕೂ ಹೆಚ್ಚು ಜೂನಿಯರ್ ಕಲಾವಿದರು ಈ ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದರು. ಆಸ್ಕರ್ ಪ್ರಶಸ್ತಿಯನ್ನು ಗಮನದಲ್ಲಿಟ್ಟುಕೊಂಡೇ ಈ ಸಿನಿಮಾ ತಯಾರಾಗಿದೆ. ಚಿತ್ರವು ಕನ್ನಡ, ಹಿಂದಿ, ತೆಲುಗು, ಮಲಯಾಳ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಆಕ್ಟೋಬರ್ 2ರಂದು ತೆರೆ ಕಾಣಲಿದೆ.
.ಕಾಂತಾರ ಚಾಪ್ಟರ್ -1 ಚಿತ್ರೀಕರಣದ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲಂಸ್.ಕಾಂತಾರ ಪ್ರೀಕ್ವೆಲ್ನಲ್ಲಿ ಹೀಗಿರಲಿದ್ದಾರೆ ರಿಷಬ್: ಅಕ್ಟೋಬರ್ 2ಕ್ಕೆ ರಿಲೀಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.