ರಿಷಬ್ ಶೇಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಅಧ್ಯಾಯ–1 ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರು ಮಾತ್ರವಲ್ಲ, ಸಿನಿ ತಾರೆಯರು, ರಾಜಕೀಯ ಗಣ್ಯರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕ್ರಿಕೆಟರ್ ಕೆ.ಎಲ್. ರಾಹುಲ್ ಸಿನಿಮಾ ನೋಡಿ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿನಿಮಾ ನೋಡಿ ಹೊರಬಂದ ಕೆ.ಎಲ್.ರಾಹುಲ್ ಅವರು, 'ಕಾಂತಾರವನ್ನು ಈಗಷ್ಟೇ ನೋಡಿದೆ. ರಿಷಬ್ ಶೆಟ್ಟಿ ಸೃಷ್ಟಿಸಿರುವ ಈ ಮ್ಯಾಜಿಕ್ಗೆ ತಲೆಬಾಗುತ್ತೇನೆ. ಮಂಗಳೂರಿನ ಜನರು, ಅವರ ಮನಸ್ಸು ಎಲ್ಲವನ್ನೂ ತುಂಬಾ ಸುಂದರವಾಗಿ ಪ್ರಸ್ತುತಪಡಿಸಿದ್ದೀರಿ' ಎಂದು ಅವರು ಬರೆದುಕೊಂಡಿದ್ದಾರೆ.

ಪ್ರಕಾಶ್ ರಾಜ್ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ ಅವರು, ‘ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು. ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು ಮತ್ತು ಕನ್ನಡ ಸಿನಿಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ‘ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.