ಶುಕ್ರವಾರ, ಮಾರ್ಚ್ 31, 2023
25 °C

ಶೀಘ್ರದಲ್ಲೇ ಇಟಾಲಿಯನ್, ಸ್ಪ್ಯಾನಿಶ್ ಭಾಷೆಯಲ್ಲಿ ಕಾಂತಾರ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌  Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ಮೆಚ್ಚುಗೆ ಗಳಿಸಿತ್ತು.

ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕಾಂತಾರ ನಿರ್ಮಾಪಕರು ಈ ಚಿತ್ರವನ್ನು ಇಟಾಲಿಯನ್ ಹಾಗೂ ಸ್ಪ್ಯಾನಿಶ್ ಭಾಷೆಯಲ್ಲಿ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್‌, ಭಾರತೀಯರೂ ಸೇರಿದಂತೆ ಜಗತ್ತಿನ ಸಿನಿಪ್ರಿಯರ ಮನಗೆದ್ದಿರುವ ನಮ್ಮ ಕಾಣಿಕೆ ಕಾಂತಾರವನ್ನು ಶೀಘ್ರದಲ್ಲೇ ಇಟಾಲಿಯನ್ ಹಾಗೂ ಸ್ಪ್ಯಾನಿಶ್ ಭಾಷೆಯಲ್ಲಿ ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

ಮಾರ್ಚ್ 17 ರಂದು ‘ಕಾಂತಾರ’ ಸಿನಿಮಾ ವಿಶ್ವಸಂಸ್ಥೆಯ ಪ್ರತಿನಿಧಿಗಳಿಗಾಗಿ ಜಿನಿವಾದಲ್ಲಿ ಪ್ರದರ್ಶನಗೊಂಡಿತ್ತು. ಈ ಸಂದರ್ಭದಲ್ಲಿ ನಟ ನಿರ್ದೇಶಕ ರಿಷಬ್ ಶಟ್ಟಿ ಭಾಗವಹಿಸಿದ್ದರು.

ದೇಶದಾದ್ಯಂತ 2022ರ ಸೆ.30ರಂದು ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿ ತೆರೆಕಂಡಿದ್ದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. 

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದೆ. ಈ ಚಿತ್ರದಲ್ಲಿ ರಿಷಬ್‌ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ಕೆಜಿಎಫ್‌ –1, ಕೆಜಿಎಫ್‌–2 ನಿರ್ಮಿಸಿರುವ ಹೊಂಬಾಳೆ ಫಿಲಂಸ್‌ ಕಾಂತಾರ ಚಿತ್ರವನ್ನು ನಿರ್ಮಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು