ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ’ ಸಿನಿಮಾ ಪ್ರೀಕ್ವೆಲ್(ಹಿಂದಿನ ಕಥೆ) ಅ.2ರಂದು ಬಿಡುಗಡೆಯಾಗಲಿದ್ದು, ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ತಿಳಿಸಿದೆ.

ಪ್ರೀಕ್ವೆಲ್ ಮುಂದೂಡಲ್ಪಡಲಿದೆ ಎನ್ನುವ ಊಹಾಪೋಹಗಳ ಬೆನ್ನಲ್ಲೇ ಮತ್ತೊಮ್ಮೆ ಹೊಂಬಾಳೆ ಸ್ಪಷ್ಟನೆ ನೀಡಿದೆ. ‘ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ‘ಕಾಂತಾರ’ ಚಿತ್ರದ ಯಶಸ್ಸಿನ ನಂತರ ‘ಕಾಂತಾರ ಚಾಪ್ಟರ್ 1’ ಕೂಡಾ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ. ನಿಮ್ಮ ಕಾತುರಕ್ಕೆ ತಕ್ಕಂತೆ ಚಿತ್ರವೂ ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ. ಆದ್ದರಿಂದ ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನಷ್ಟೇ ನಂಬಿ’ ಎಂದು ಚಿತ್ರತಂಡ ತಿಳಿಸಿದೆ.

ಆಸ್ಕರ್ಗಾಗಿಯೇ ಕಾಂತಾರ: ‘ಕಾಂತಾರ’ ಪ್ರೀಕ್ವೆಲ್ ಸಿನಿಮಾವನ್ನು ಆಸ್ಕರ್ ದೃಷ್ಟಿಯಲ್ಲಿಟ್ಟುಕೊಂಡೇ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಮಾಡುತ್ತಿದೆ. ಚಿತ್ರವನ್ನು ಆಸ್ಕರ್ ಸ್ಪರ್ಧೆಯ ಅಂಗಳಕ್ಕೆ ತಲುಪಿಸಲು ಈಗಿನಿಂದಲೇ ಪ್ರಯತ್ನ ನಡೆಸಿರುವುದಾಗಿ ಹೊಂಬಾಳೆ ಫಿಲ್ಮ್ಸ್ನ ಸಹ ಸಂಸ್ಥಾಪಕ ಚಲುವೇಗೌಡ ಅವರು ಇತ್ತೀಚೆಗೆ ತಿಳಿಸಿದ್ದರು.

‘ಕಾಂತಾರ ಚಾಪ್ಟರ್ 1’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಕುಂದಾಪುರದಲ್ಲಿ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ತಮ್ಮ ಪಾತ್ರದ ಸಲುವಾಗಿ ರಿಷಬ್ ಶೆಟ್ಟಿ ಕಳರಿಪಯಟ್ಟು ತರಬೇತಿ ಪಡೆದಿದ್ದಾರೆ. ತೆಲುಗಿನ ಹಿಟ್ ಸಿನಿಮಾ ‘ಆರ್ಆರ್ಆರ್’ನ ಆ್ಯಕ್ಷನ್ ನಿರ್ದೇಶಕರಾಗಿದ್ದ ಟೊಡರ್ ಲ್ಯಾಜರೋವ್ ‘ಕಾಂತಾರ’ದ ಸಾಹಸ ದೃಶ್ಯಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಪ್ರೀಕ್ವೆಲ್ ಅನ್ನು ಈಗಾಗಲೇ ಪ್ರೈಂ ವಿಡಿಯೊ ದೊಡ್ಡ ಮೊತ್ತಕ್ಕೆ ಖರೀದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.