ರಿಷಭ್ ಶೆಟ್ಟಿ ಕಾಂತಾರ–2ದಲ್ಲಿ ಪ್ರಿಕ್ವೆಲ್ ಕಥೆ ಹೇಳುವ ಸಾಧ್ಯತೆ ದಟ್ಟವಾಗಿದೆ ಎಂದು ‘ಪ್ರಜಾವಾಣಿ’ ಈ ಹಿಂದೆಯೇ ವರದಿ ಮಾಡಿತ್ತು. ಅದು ಅಕ್ಷರಶಃ ನಿಜವಾಗಿದೆ. ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾದ ಮುಂದಿನ ಭಾಗದ ಕಥೆ ಏನು ಎನ್ನುವ ಕುತೂಹಲಕ್ಕೆ ಸ್ವತಃ ಅವರೇ ಉತ್ತರಿಸಿದ್ದಾರೆ.

ಇದನ್ನೂ ಓದಿ: #Kantara2: ಕಾಂತಾರ–2ಕ್ಕೆ ಸಿದ್ಧರಾಗುತ್ತಿದ್ದಾರಾ ರಿಷಬ್? ಇಲ್ಲಿದೆ ಮಾಹಿತಿ

ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ‘ಕಾಂತಾರ’ ನೂರು ದಿನಗಳನ್ನು ಪೂರೈಸಿದೆ. ಇದರ ಬೆನ್ನಲ್ಲೇ ಚಿತ್ರತಂಡವು, ಭಾನುವಾರ(ಫೆ.5) ಅದ್ಧೂರಿಯಾಗಿ ಶತದಿನೋತ್ಸವವನ್ನು ಆಚರಿಸಿದೆ. ಇದೇ ಸಂದರ್ಭದಲ್ಲಿ ಚಿತ್ರದ ಮುಂದಿನ ಭಾಗದ ಬಗ್ಗೆ ರಿಷಬ್ ಮಾಹಿತಿ ಹಂಚಿಕೊಂಡಿದ್ದಾರೆ.

ಚಿತ್ರತಂಡದಲ್ಲಿ ಕಾರ್ಯನಿರ್ವಹಿಸಿದರನ್ನು, ಚಿತ್ರಮಂದಿರಗಳ ಮಾಲೀಕರು, ವಿತರಕರನ್ನು ಸ್ವತಃ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್‌ನ ಮುಖ್ಯಸ್ಥ ವಿಜಯ್ ಕಿರಗಂದೂರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಬಳಿಕ ಮಾತನಾಡಿ, ‘ನೀವು ನೋಡಿದ್ದು ‘ಕಾಂತಾರ’ ಪಾರ್ಟ್ 2. ‘ಕಾಂತಾರ’ ಪಾರ್ಟ್ 1 ಬರಬೇಕಾಗಿದೆ. ಅದನ್ನು ಶೀಘ್ರದಲ್ಲೇ ನೀವು ನೋಡಲಿದ್ದೀರಿ’ ಎಂದಿದ್ದಾರೆ ರಿಷಬ್. ಈ ಮೂಲಕ ‘ಕಾಂತಾರ’ದ ಪ್ರೀಕ್ವೆಲ್(ಹಿಂದಿನ ಕಥೆ) ಬರುವುದು ಅಧಿಕೃತವಾಗಿದೆ.

‘ಒಟಿಟಿಯಲ್ಲಿ ರಿಲೀಸ್ ಆದರೂ, ಚಿತ್ರಮಂದಿರಗಳಲ್ಲಿ ‘ಕಾಂತಾರ’ ಸಿನಿಮಾ ಪ್ರದರ್ಶನ ಮುಂದುವರಿದಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಾದೇಶಿಕ ಸಿನಿಮಾವೊಂದು ಬಿಡುಗಡೆಯಾಗಿ, ತನ್ನಷ್ಟಕ್ಕೇ ಪ್ಯಾನ್ ಇಂಡಿಯಾ ಸ್ವರೂಪ ಪಡೆದಿತ್ತು. ನೆಟ್‌ಫ್ಲಿಕ್ಸ್‌ನಲ್ಲೂ ‘ಕಾಂತಾರ’ ಸಿನಿಮಾ ಇಂಗ್ಲಿಷ್‌ಗೆ ಡಬ್ ಮಾಡಿ ಬಿಡುಗಡೆ ಮಾಡಲು ಪ್ರಯತ್ನ ನಡೆಯುತ್ತಿದೆ’ ಎಂದರು ರಿಷಬ್.

ಮಾಹಿತಿಯಂತೆ ರಿಷಬ್ ಸದ್ಯ ಪ್ರೀಕ್ವೆಲ್‌ನ ಸ್ಕ್ರಿಪ್ಟ್ ಕಾರ್ಯಗಳನ್ನು ಆರಂಭಿಸಿದ್ದು, ಜೂನ್ ವೇಳೆಗೆ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. 2024ರ ಮಧ್ಯಭಾಗದಲ್ಲಿ ಸಿನಿಮಾ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್ ಯೋಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.