ಶನಿವಾರ, ಡಿಸೆಂಬರ್ 3, 2022
26 °C
ರಿಷಬ್ ಶೆಟ್ಟಿ- ಎಬಿ ಡಿವಿಲಿಯರ್ಸ್‌ ಭೇಟಿ

ಎಬಿ ಡಿವಿಲಿಯರ್ಸ್‌ ಭೇಟಿಯಾದ ಕಾಂತಾರ ತಾರೆ ರಿಷಬ್ ಶೆಟ್ಟಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರದ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಅವರು ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅವರನ್ನು ಭೇಟಿಯಾಗಿದ್ದಾರೆ.

360 ಡಿಗ್ರಿ ಬ್ಯಾಟರ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಅವರನ್ನು ಭೇಟಿಯಾದ ಸಂಭ್ರಮ ಹಂಚಿಕೊಂಡಿರುವ ರಿಷಬ್, ರಿಯಲ್ 360 ಸೂಪರ್‌ಹೀರೊ ಅವರನ್ನು ಭೇಟಿಯಾದೆ. ಅವರು ನಮ್ಮ ಬೆಂಗಳೂರಿಗೆ ಮರಳಿ ಬಂದಿದ್ದಾರೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಎಬಿ ಡಿವಿಲಿಯರ್ಸ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಎಬಿ ಡಿವಿಲಿಯರ್ಸ್ ಅವರನ್ನು ರಿಷಬ್ ಭೇಟಿಯಾದ ವಿಡಿಯೊವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು