ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಮ್ಮೆ ನಿರ್ದೇಶನಕ್ಕೆ ಇಳಿದ ನಿರ್ಮಾಪಕ ಕರಣ್ ಜೋಹರ್: ಹೊಸ ಚಿತ್ರ ಘೋಷಣೆ

ನಿನ್ನೆ ಶನಿವಾರ (ಮೇ 25) ಬಾಲಿವುಡ್ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ, ನಟ ಕರಣ್ ಜೋಹರ್ ಅವರು ತಮ್ಮ 51ನೇ ವಸಂತಕ್ಕೆ ಪದಾರ್ಪಣೆ ಮಾಡಿದರು.
Published 26 ಮೇ 2024, 6:28 IST
Last Updated 26 ಮೇ 2024, 6:28 IST
ಅಕ್ಷರ ಗಾತ್ರ

ಬೆಂಗಳೂರು:‌‌ ನಿನ್ನೆ ಶನಿವಾರ (ಮೇ 25) ಬಾಲಿವುಡ್ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ, ನಟ ಕರಣ್ ಜೋಹರ್ ಅವರು ತಮ್ಮ 51ನೇ ವಸಂತಕ್ಕೆ ಪದಾರ್ಪಣೆ ಮಾಡಿದರು.

ಈ ವೇಳೆ ಬಾಲಿವುಡ್ ಸೇರಿದಂತೆ ಅನೇಕ ಗಣ್ಯರು ಅಭಿಮಾನಿಗಳು ಅವರಿಗೆ ಶುಭಾಶಯ ಕೋರಿದ್ದಾರೆ.

ಇದೇ ವೇಳೆ ಕರಣ್ ಅವರು ಮತ್ತೊಮ್ಮೆ ನಿರ್ದೇಶನಕ್ಕೆ ಇಳಿದಿದ್ದಾರೆ. ಇನ್ನೂ ಹೆಸರಿಡದ ಹೊಸ ಪ್ರೊಜೆಕ್ಟ್ ಕೈಗೆತ್ತಿಕೊಂಡಿರುವ ಅವರು ಹೊಸ ಚಿತ್ರ ನಿರ್ದೇಶಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು ರೆಡಿ ಸ್ಟಾರ್ಟ್ ಗೋ ಎಂದು ಹೇಳಿದ್ದಾರೆ.

ನಿರ್ಮಾಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಅವರು ಕುಚ್ ಕುಚ್ ಹೋತಾ ಹೈ ಸಿನಿಮಾ ಸೇರಿದಂತೆ 10 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. 70 ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. 2023 ರಲ್ಲಿ ಅವರು 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' ಸಿನಿಮಾ ನಿರ್ದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT