ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆ

Published 4 ಜುಲೈ 2024, 14:10 IST
Last Updated 4 ಜುಲೈ 2024, 14:10 IST
ಅಕ್ಷರ ಗಾತ್ರ

ಬೆಂಗಳೂರು: ಕರೀನಾ ಕಪೂರ್ ಮುಖ್ಯಪಾತ್ರದಲ್ಲಿರುವ ಥ್ರಿಲ್ಲರ್ ಸಿನಿಮಾ ‘ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್’ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಸೆಪ್ಟೆಂಬರ್ 13ರಂದು ಚಿತ್ರಮಂದಿರಗಳಲ್ಲಿ ‘ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್’ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಚಿತ್ರವನ್ನು ಹನ್ಸಲ್ ಮೆಹ್ತಾ ನಿರ್ದೇಶಿಸಿದ್ದು ಏಕ್ತಾ ಕಪೂರ್ ನಿರ್ಮಾಣ ಮಾಡಿದ್ದಾರೆ. ಏಕ್ತಾ ಕಪೂರ್ ಅವರು ಬಿಡುಗಡೆ ಪೋಸ್ಟರ್ ಅನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಕರೀನಾ ಜೊತೆ ಆಶಾ ಟಂಡನ್, ರಣವೀರ್ ಬ್ರಾರ್, ಕೇತ್ ಅಲೇನ್ ಜೊತೆಯಾಗಿದ್ದಾರೆ.

ಕರೀನಾ ಮುಖ್ಯಪಾತ್ರದಲ್ಲಿ ನಟಿಸಿದ್ದ ‘ಕ್ರೇವ್’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಕಂಡಿತ್ತು. ಸದ್ಯ ಈ ಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ ನೋಡಲು ಲಭ್ಯವಿದೆ. ಹಾಗೆಯೇ ಕರೀನಾ ಅವರ ಮತ್ತೊಂದು ಚಿತ್ರ ರೋಹಿತ್ ಶೆಟ್ಟಿ ನಿರ್ದೇಶನದ ಸಿಂಗಂ ಅಗೇನ್ ನವೆಂಬರ್ 3ಕ್ಕೆ ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT