ಗುರುವಾರ , ಏಪ್ರಿಲ್ 15, 2021
21 °C

2ನೇ ಮಗುವಿನ ಫೋಟೊ ಹಂಚಿಕೊಳ್ಳುವ ಮೂಲಕ ಮಹಿಳಾ ದಿನಾಚರಣೆ ಶುಭಾಶಯ ಕೋರಿದ ಕರೀನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್‌ ನಟಿ ಕರೀನಾ ಕಪೂರ್ ಇತ್ತೀಚೆಗಷ್ಟೇ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ವಿಶ್ವ ಮಹಿಳಾ ದಿನಾಚರಣೆಯಾದ ಇಂದು ತಮ್ಮ ಮಗುವಿನೊಂದಿಗಿನ ಫೋಟೊವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಮಹಿಳಾ ದಿನದ ಶುಭಾಶಯವನ್ನೂ ತಿಳಿಸಿದ್ದಾರೆ ಈ ಬೆಡಗಿ.

ಮಗುವನ್ನು ಎದೆಗಪ್ಪಿ ಹಿಡಿದುಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಬೇಬೋ ‘ಹೆಣ್ಣುಮಕ್ಕಳಿಂದ ಸಾಧ್ಯವಾಗದೇ ಇರುವುದು ಯಾವುದೂ ಇಲ್ಲ. ನನ್ನೆಲ್ಲಾ ಪ್ರೀತಿಪಾತ್ರರಿಗೆ ಮಹಿಳಾ ದಿನದ ಶುಭಾಶಯ’ ಎಂದು ಬರೆದುಕೊಂಡಿದ್ದಾರೆ.

ಇವರ ಈ ಪೋಸ್ಟ್‌ಗೆ ಅಭಿಮಾನಿಗಳು ಹಾಗೂ ಬಾಲಿವುಡ್ ಸಿನಿತಾರೆಯರು ಕಮೆಂಟ್ ಮಾಡಿದ್ದಾರೆ. ಕರೀನಾ ಹಾಗೂ ಸೈಫ್‌ ಅಲಿ ಖಾನ್ ದಂಪತಿಗೆ ಫೆಬ್ರುವರಿ 21ಕ್ಕೆ ಎರಡನೇ ಮಗು ಜನಿಸಿತ್ತು. ಇವರಿಗೆ 4 ವರ್ಷದ ತೈಮೂರ್ ಹೆಸರಿನ ಮೊದಲ ಮಗನಿದ್ದಾನೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು