ಕರೀನಾ, ಸೈಫ್ ದಂಪತಿಗೆ ಗಂಡು ಮಗು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ದಂಪತಿಯು ಎರಡನೇ ಮಗುವಿಗೆ ಪೋಷಕರಾಗಿದ್ದಾರೆ.
ಕರೀನಾ ಕಪೂರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ 9 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
‘ಕರೀನಾ ಮುದ್ದಾದ ಗಂಡುವಿಗೆ ಜನ್ಮ ನೀಡಿದ್ದಾಳೆ. ನಾನು ಆದಷ್ಟು ಬೇಗ ಆಸ್ಪತ್ರೆಗೆ ಭೇಟಿ ನೀಡುತ್ತೇನೆ’ ಎಂದು ಕರೀನಾ ಅವರ ತಂದೆ ರಣಧೀರ್ ಕಪೂರ್ ಅವರು ತಿಳಿಸಿದರು.
ನಮ್ಮ ಕುಟುಂಬಕ್ಕೆ ಹೊಸ ಸದಸ್ಯ ಬಂದಿದ್ದಾನೆ.ನಿಮ್ಮ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದಗಳು ಎಂದು ದಂಪತಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಇವುಗಳನ್ನೂ ಓದಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.