ವಿತರಕ ಮತ್ತು ಉದ್ಯಮಿ ಪ್ರಕಾಶ್ ಪಳನಿ, ‘ಕರ್ಕಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಹಿಂದೆ ‘ವಾಟ್ಸಾಪ್ ಲವ್’, ‘ರಾಜರಾಣಿ’ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ ಜಯಪ್ರಕಾಶ್ (ಜೆ.ಪಿ) ರೆಡ್ಡಿ ‘ಕರ್ಕಿ’ ಚಿತ್ರದ ನಾಯಕ. ಅವರಿಗೆ ಮಲಯಾಳಿ ಬೆಡಗಿ ಮೀನಾಕ್ಷಿ ಜೋಡಿಯಾಗಿದ್ದಾರೆ. ಉಳಿದಂತೆ ಸಾಧು ಕೋಕಿಲ, ಬಲ ರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ ಮೊದಲಾದವರು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಹೃಷಿಕೇಶ ಛಾಯಾಚಿತ್ರಗ್ರಹಣ, ಕ್ರೇಜಿಮೈಂಡ್ಸ್ ಶ್ರೀ ಸಂಕಲನ, ಅರ್ಜುನ್ ಜನ್ಯ ಸಂಗೀತವಿದೆ.