ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ ಕುಮಾರ್‌ ಬಗ್ಗೆ ಹಗುರವಾಗಿ ಮಾತನಾಡಬಾರದು: ದುನಿಯಾ ವಿಜಯ್

Published 5 ಮೇ 2023, 12:37 IST
Last Updated 5 ಮೇ 2023, 12:37 IST
ಅಕ್ಷರ ಗಾತ್ರ

ಮೈಸೂರು: ‘ದೊಡ್ಡಮನೆಯ ದೊಡ್ಡ ಮಗನಾದ ನಟ ಶಿವರಾಜ್‌ ಕುಮಾರ್ ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು’ ಎಂದು ನಟ ದುನಿಯಾ ವಿಜಯ್ ಹೇಳಿದರು.

ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರವಾಗಿ ಪ್ರಚಾರಕ್ಕೆಂದು ಶುಕ್ರವಾರ ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

‘ಶಿವರಾಜ್‌ ಕುಮಾರ್‌ ಎಲ್ಲರನ್ನೂ ಪ್ರೀತಿಸುವವರು. ಯಾರು ಕರೆದರೂ ಚುನಾವಣಾ ಪ್ರಚಾರಕ್ಕೆ ಹೋಗುತ್ತಾರೆ. ಅಣ್ಣಾವ್ರ ಮನೆಯವರು, ದೊಡ್ಡತನ ಹೊಂದಿರುವವರು. ದೇವರಂತಹ ಮನಸ್ಸಿವರು. ಯಾವುದೇ ಕಾರಣಕ್ಕೂ ದೊಡ್ಡತನವನ್ನು ಕಳೆದುಕೊಂಡವರಲ್ಲ. ಅವರ ಬಗ್ಗೆ ಮಾತನಾಡುವುದು ತಪ್ಪು’ ಎಂದರು.

‘ನಟರು ಒಬ್ಬರ ಪರವಾಗಿ ಪ್ರಚಾರಕ್ಕೆ ಬಂದರೆ ಮತ್ತೊಬ್ಬರಿಗೆ ಆಗುವುದಿಲ್ಲ, ಅದು ನಿರೀಕ್ಷಿತ’ ಎಂದು ತಿಳಿಸಿದರು.

‘ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಾರೆ. ವರುಣ ಕ್ಷೇತ್ರದ ಜನರು ಮನೆ ಮಗನನ್ನು ಗೆಲ್ಲಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT