ಬೆಂಗಳೂರು: 2018ನೇ ಸಾಲಿನ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ 'ಆ ಕರಾಳ ರಾತ್ರಿ' ಸಿನಿಮಾ ಆಯ್ಕೆಯಾಗಿದೆ. 'ರಾಮನ ಸವಾರಿ' ಮತ್ತು 'ಒಂದಲ್ಲಾ ಎರಡಲ್ಲಾ' ಸಿನಿಮಾಗಳು ಕ್ರಮವಾಗಿಎರಡನೇ ಮತ್ತು ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿಗೆ ಭಾಜನವಾಗಿವೆ.

ರಿಷಬ್ ಶೆಟ್ಟಿ ನಿರ್ದೇಶನ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿಗೆ, 'ಸಂತಕವಿ ಕನಕದಾಸ ರಾಮಧಾನ್ಯ' ಸಿನಿಮಾ ವಿಶೇಷ ಸಾಮಾಜಿಕ ಕಾಳಜಿಯ ಪ್ರಶಸ್ತಿಗೆಹಾಗೂ ಅತ್ಯುತ್ತಮ ಮಕ್ಕಳ ಚಿತ್ರವಾಗಿ 'ಹೂ ಬಳ್ಳಿ' ಆಯ್ಕೆಯಾಗಿವೆ.

ಅತ್ಯುತ್ತಮ ನಟನಾಗಿ ರಾಘವೇಂದ್ರ ರಾಜ್ಕುಮಾರ್, ಅತ್ಯುತ್ತಮ ನಟಿಯಾಗಿ ಮೇಘನಾ ರಾಜ್ ಮತ್ತು ಅತ್ಯುತ್ತಮ ಪೋಷಕ ನಟರಾಗಿ ಬಾಲಾಜಿ ಮನೋಹರ್ ಹಾಗೂ ಅತ್ಯುತ್ತಮ ಪೋಷಕ ನಟಿಯಾಗಿ ವೀಣಾ ಸುಂದರ್ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2018 ನೆ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದರು. ಆಯ್ಕೆ ಸಮಿತಿಗಳ ಅಧ್ಯಕ್ಷರುಗಳಾದ ಜೋಸೈಮನ್, ವಸಂತಕುಮಾರ್ ಪಾಟೀಲ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಸ್ ಎನ್. ಸಿದ್ದರಾಮಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಶಸ್ತಿ ಪಟ್ಟಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.