ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಚಿನ್ನೇಗೌಡ ಆಯ್ಕೆ

7

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಚಿನ್ನೇಗೌಡ ಆಯ್ಕೆ

Published:
Updated:

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ನಿರ್ಮಾಪಕ ಹಾಗೂ ವಿತರಕ ಎ.ಚಿನ್ನೇಗೌಡ ಆಯ್ಕೆಯಾಗಿದ್ದಾರೆ.

ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, 551 ಮತಗಳನ್ನು ಪಡೆದ ಚಿನ್ನೇಗೌಡರು ಎದುರಾಳಿ ಅಭ್ಯರ್ಥಿ ಮಾರ್ಸ್ ಸುರೇಶ್ ಅವರನ್ನು 234 ಮತಗಳ ಅಂತರದಿಂದ ಸೋಲಿಸಿದರು.

ಈ ಬಾರಿ ಅಧ್ಯಕ್ಷ ಸ್ಥಾನ ವಿತರಕರ ವಲಯಕ್ಕೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕರ ವಲಯದಿಂದ ಎಚ್‌. ಸುಬ್ರಹ್ಮಣಿ (ಕರಿಸುಬ್ಬು), ವಿತರಕರ ವಲಯದಿಂದ ಕೆ. ಮಂಜು (274 ಮತಗಳು) ಆಯ್ಕೆಯಾಗಿದ್ದಾರೆ. ಪ್ರದರ್ಶಕರ ವಲಯದಿಂದ ಉಪಾಧ್ಯಕ್ಷರ ಸ್ಥಾನಕ್ಕೆ ಅಶೋಕ್ ಕೆ.ಸಿ. ಅವರು ಅವಿರೋಧವಾಗಿ ಆಯ್ಕೆಯಾದರು.

ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕರ ವಲಯದಿಂದ ಸ್ಪರ್ಧಿಸಿದ್ದ ಭಾ.ಮ. ಹರೀಶ್, ವಿತರಕರ ವಲಯದಿಂದ ಎಚ್‌. ಸಿ. ಶ್ರೀನಿವಾಸ್ ಗೆಲುವು ಸಾಧಿಸಿದರು. ಪ್ರದರ್ಶಕರ ವಲಯದಲ್ಲಿ ಆರ್. ಸುಂದರ ರಾಜು ಅವಿರೋಧವಾಗಿ ಆಯ್ಕೆಯಾದರು. ಕೆ.ಎಂ. ವಿರೇಶ್ ಅವರು ವಾಣಿಜ್ಯ ಮಂಡಳಿಯ ಗೌರವ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕರ ವಲಯದ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಮತದಾನದ ಮೂಲಕ ಆಯ್ಕೆ ಮಾಡಲಾಯಿತು.

ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಜಗ್ಗೇಶ್, ವಿಜಯ ರಾಘವೇಂದ್ರ, ಜಯಮಾಲಾ, ಲೀಲಾವತಿ, ರಕ್ಷಿತ್ ಶೆಟ್ಟಿ, ಪಿ. ಶೇಷಾದ್ರಿ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಮತದಾನ ಮಾಡಿದರು.

ಫಲಿತಾಂಶದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚಿನ್ನೇಗೌಡ, ‘ಚುನಾವಣೆಯನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು. ಆಯ್ಕೆಯಾದ ಎಲ್ಲರೂ ಒಟ್ಟಾಗಿ ಚಿತ್ರರಂಗ ಹಾಗೂ ವಾಣಿಜ್ಯ ಮಂಡಳಿಯ ಘನತೆಯನ್ನು ಎತ್ತಿಹಿಡಿಯುವಂಥ ಕೆಲಸ ಮಾಡುತ್ತೇವೆ. ಹಿಂದಿನ ಅಧ್ಯಕ್ಷರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಚರ್ಚಿಸಿ ಚಿತ್ರರಂಗದ ಅಗತ್ಯಗಳನ್ನು ಮನವರಿಕೆ ಮಾಡಿಕೊಡುತ್ತೇನೆ’ ಎಂದರು.

‘ಸದ್ಯ ಕನ್ನಡ ಚಿತ್ರರಂಗದ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ಸ್ಟಾರ್ ನಟರಾದ ದರ್ಶನ್, ಸುದೀಪ್, ಶಿವರಾಜ್ ಕುಮಾರ್ ಸೇರಿ ಉಳಿದ ನಟರೂ ವರ್ಷಕ್ಕೆ ಕನಿಷ್ಠ ಎರಡರಿಂದ ಮೂರು ಸಿನಿಮಾ ಮಾಡಬೇಕು. ಇದರಿಂದ ಚಿತ್ರರಂಗದ ಪರಿಸ್ಥಿತಿ ಸುಧಾರಿಸುತ್ತದೆ’ ಎಂದೂ ಹೇಳಿದರು.

2015ರ ನವೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಾ.ರಾ. ಗೋವಿಂದು ಅವರೇ ಇದುವರೆಗೆ ಅಧಿಕಾರದಲ್ಲಿ ಮುಂದುವರಿದಿದ್ದರು. ಬುಧವಾರ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸದಸ್ಯರು ಅಧಿಕಾರ ಸ್ವೀಕರಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !