ಬೆಂಗಳೂರು: "ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರಗಳನ್ನು ಅಣಕಿಸಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ತನಿಖೆಗೆ ಸಹಕರಿಸಬೇಕು ಮತ್ತು ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಯಾವುದೇ ಆತುರದ ಕ್ರಮ ಕೈಗೊಳ್ಳಬಾರದು" ಎಂದು ಕರ್ನಾಟಕ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ಆದೇಶಿಸಿದೆ.

"ನನ್ನ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ದಾಖಲಾಗಿರುವ ಖಾಸಗಿ ದೂರು ಮತ್ತು ಹೈಗ್ರೌಂಡ್ಸ್ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು" ಎಂದು ಕೋರಿ ರಣವೀರ್ ಸಿಂಗ್ (41) ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

"ರಣವೀರ್ ಸಿಂಗ್ ದೊಡ್ಡ ನಟ ಇರಬಹುದು. ಆದರೆ, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಚೇಷ್ಟೆ ಮಾಡುವ ಮೂಲಕ ಅಣಕಿಸಿ ಸವಾರಿ ಮಾಡುವುದು ಸಲ್ಲ" ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ರಣವೀರ್ ನಡೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ ಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ರಣವೀರ್ ಪರ ಪದಾಂಕಿತ ಹಿರಿಯ ವಕೀಲ ಸಜನ್ ಪೂವಯ್ಯ ಮತ್ತು ಪ್ರಾಸಿಕ್ಯೂಷನ್ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ವಾದ ಮಂಡಿಸಿದರು.

ಪ್ರಕರಣವೇನು?: ಗೋವಾದಲ್ಲಿ 2025ರ ನವೆಂಬರ್ 28ರಂದು ‘ಭಾರತೀಯ ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ದ ಸಮಾರೋಪ ಸಮಾರಂಭ ಜರುಗಿತ್ತು. ಈ ಸಂದರ್ಭದಲ್ಲಿ ರಣವೀರ್ ಸಿಂಗ್, ‘ಕಾಂತಾರ ಚಾಪ್ಟರ್-1’ ಕುರಿತು ಮಾತನಾಡಿದ್ದರು.

ತಮ್ಮ ಮಾತುಗಳಲ್ಲಿ ಅವರು, ‘ಕರಾವಳಿ ಕರ್ನಾಟಕದ ಪಂಜುರ್ಲಿ, ಗುಳಿಗ ದೈವಗಳ ದೈವೀಕ ಅಭಿವ್ಯಕ್ತಿಯನ್ನು ಒರಟು, ಹಾಸ್ಯಮಯ ಮತ್ತು ಅವಹೇಳನಕಾರಿ ರೀತಿಯಲ್ಲಿ ಅನುಕರಣೆ ಮಾಡಿ ಅಣಕಿಸಿದ್ದಾರೆ. ಚಾಮುಂಡಿ ದೈವವನ್ನು ಹೆಣ್ಣು ದೆವ್ವ ಎಂದು ಕರೆದು ಅಪಮಾನ ಮಾಡಿದ್ದಾರೆ. ಈ ಮೂಲಕ ಲಕ್ಷಾಂತರ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ. ಸಮಾಜದಲ್ಲಿ ವಿಭಿನ್ನ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಪ್ರಚೋದಿಸಿದ್ದಾರೆ. ಹಾಗಾಗಿ, ರಣವೀರ್ ಸಿಂಗ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ನಗರದ ವಕೀಲ ಪ್ರಶಾಂತ್ ಮೆಥಲ್ 1ನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ ಸಿಜೆಎಂ ನ್ಯಾಯಾಲಯ ತನಿಖೆ ನಡೆಸುವಂತೆ 2026ರ ಜನವರಿ 23ರಂದು ಪೊಲೀಸರಿಗೆ ನಿರ್ದೇಶಿಸಿತ್ತು. ಇದರನ್ವಯ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಭಾರತೀಯ ನ್ಯಾಯ ಸಂಹಿತಾ–2023ರ (ಬಿಎನ್ಎಸ್) ಕಲಂ 196, 299 ಮತ್ತು 302ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ರಣವೀರ್ ಸಿಂಗ್ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
.ಬೆಂಗಳೂರು | ದೈವಕ್ಕೆ ಅಪಹಾಸ್ಯ: ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್.Dhurandhar: ಆರ್.ಮಾಧವನ್ ಫಸ್ಟ್ ಲುಕ್ ಹಂಚಿಕೊಂಡ ನಟ ರಣವೀರ್ ಸಿಂಗ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.