ಗುರುವಾರ , ಆಗಸ್ಟ್ 18, 2022
26 °C

ಭೂಲ್ ಭೂಲೆಯ್ಯ 2: ನೆಟ್‌ಫ್ಲಿಕ್ಸ್‌ನಲ್ಲಿ ಗ್ಲೋಬಲ್ ಬ್ಲಾಕ್‌ಬಸ್ಟರ್ ಸಿನಿಮಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

dh file

ಬೆಂಗಳೂರು: ಕಾರ್ತಿಕ್ ಆರ್ಯನ್ ಅಭಿನಯದ ‘ಭೂಲ್ ಭೂಲೆಯ್ಯ 2‘ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ‘ಗ್ಲೋಬಲ್ ಬ್ಲಾಕ್‌ಬಸ್ಟರ್‘ ಎಂಬ ಖ್ಯಾತಿ ಪಡೆದುಕೊಂಡಿದೆ.

ಇಂಗ್ಲಿಷೇತರ ಭಾಷೆಯ ಸಿನಿಮಾಗಳ ಪಟ್ಟಿಯಲ್ಲಿ ಜಾಗತಿಕವಾಗಿ ಭೂಲ್ ಭೂಲೆಯ್ಯ 2 ಸಿನಿಮಾ ಟ್ರೆಂಡಿಂಗ್‌ನಲ್ಲಿದ್ದು, ಅತಿ ಹೆಚ್ಚಿನ ವ್ಯೂಸ್ ಪಡೆದುಕೊಂಡಿದೆ.

ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ₹200 ಕೋಟಿ ಗಳಿಕೆ ಮಾಡಿದ ಬಳಿಕ ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿತ್ತು.

ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಟ್ರೆಂಡ್ ಆಗಿರುವುದರ ಬಗ್ಗೆ ಖುಷಿ ಹಂಚಿಕೊಂಡಿರುವ ಕಾರ್ತಿಕ್ ಆರ್ಯನ್, ಭಾರತ ಮಾತ್ರವಲ್ಲದೆ, ಜಾಗತಿಕವಾಗಿ ನೆಟ್‌ಫ್ಲಿಕ್ಸ್‌ನಲ್ಲಿ ಭೂಲ್ ಭೂಲೆಯ್ಯ 2 ಟ್ರೆಂಡ್ ಆಗಿದೆ ಎಂದಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಬಳಿಕ ಬಾಲಿವುಡ್‌ನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ ಎಂಬ ಖ್ಯಾತಿ ಕಾರ್ತಿಕ್ ಆರ್ಯನ್ ಚಿತ್ರಕ್ಕೆ ದೊರೆತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು