ಬುಧವಾರ, ಡಿಸೆಂಬರ್ 8, 2021
23 °C

 ಡಿಸೆಂಬರ್‌ನಲ್ಲಿ ಮದುವೆಯಾಗಲಿದ್ದಾರಾ ಕತ್ರಿನಾ ಹಾಗೂ ವಿಕ್ಕಿ ಕೌಶಲ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ಬೆಡಗಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಲ್‌ ಬರುವ ಡಿಸೆಂಬರ್‌ ತಿಂಗಳಲ್ಲಿ ಮದುವೆಯಾಗಲಿದ್ದಾರೆ ಎಂಬ ಮಾತುಗಳು ಬಾಲಿವುಡ್‌ ಅಂಗಳದಲ್ಲಿ ಕೇಳಿಬಂದಿವೆ.

ವಿಕ್ಕಿ ಹಾಗೂ ಕತ್ರಿನಾ ಅವರು ಸೆಲೆಬ್ರಿಟಿ ಮ್ಯಾನೇಜರ್‌ ಖ್ಯಾತಿಯ ರೆಷ್ಮಾ ಶೆಟ್ಟಿ ಅವರನ್ನು ಭೇಟಿ ಮಾಡಿರುವುದು ಇದಕ್ಕೆ ಪುಷ್ಠಿ ನೀಡಿದೆ. ರೆಷ್ಮಾ ಶೆಟ್ಟಿ ಅವರು ಸೆಲೆಬ್ರಿಟಿಗಳ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಸಿನಿಮಾ ಪ್ರಚಾರ, ಆಡಿಯೊ ಬಿಡುಗಡೆ, ಮದುವೆ ಸೇರಿದಂತೆ ನಿಶ್ಚಿತಾರ್ಥ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. 

ಮದುವೆ ಕಾರ್ಯಕ್ರಮ ಕುರಿತು ರೆಷ್ಮಾ ಶೆಟ್ಟಿ ಅವರನ್ನು ವಿಕ್ಕಿ ಹಾಗೂ ಕತ್ರಿನಾ ಭೇಟಿ ಮಾಡಿದ್ದಾರೆ ಎಂದು ಅಭಿಮಾನಿಗಳು ಖುಷಿಯಾಗಿದ್ದಾರೆ. ರೇಷ್ಮಾ ಶೆಟ್ಟಿ ಅವರ ಕಚೇರಿಯಲ್ಲಿ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ ಬಳಿಕ ಇಬ್ಬರು ಪ್ರತ್ಯೇಕ ಕಾರುಗಳಲ್ಲಿ ತೆರಳಿದ್ದಾರೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಎರಡು ವರ್ಷಗಳಿಂದ ಕತ್ರಿನಾ ಹಾಗೂ ವಿಕ್ಕಿ ಕೌಶಲ್‌ ಡೇಟಿಂಗ್ ಮಾಡುತ್ತಿದ್ದು ಇದೀಗ ಸಪ್ತಪದಿ ತುಳಿಯಲು ಮುಂದಾಗಿದ್ದಾರೆ. 2019ರಲ್ಲಿ ದೀಪಾವಳಿ ಹಬ್ಬದಂದು ಕತ್ರಿನಾ ಅವರು ವಿಕ್ಕಿ ಮನೆಗೆ ಭೇಟಿ ನೀಡಿದ್ದರು. ಕತ್ರಿನಾ ಕೂಡ ವಿಕ್ಕಿ ಕುಟುಂಬಕ್ಕೆ ತುಂಬಾ ಹತ್ತಿರವಾಗಿದ್ದಾರೆ ಎಂಬ ಅವರ ಕುಟುಂಬದ ಮೂಲಗಳು ತಿಳಿಸಿವೆ. 

ಸದ್ಯ ಕತ್ರಿನಾ ಟೈಗರ್‌–3 ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣ ಮುಗಿದ ಬಳಿಕ ಮದುವೆ ನಿಶ್ಚಿತ ಎನ್ನಲಾಗಿದೆ. ಮದುವೆ ಕುರಿತಂತೆ ಕತ್ರಿನಾ ಹಾಗೂ ವಿಕ್ಕಿ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು