ಸೋಮವಾರ, ಆಗಸ್ಟ್ 8, 2022
21 °C

ಕೋವಿಡ್‌ನಿಂದ ಚೇತರಿಸಿಕೊಂಡು ಫಿಟ್ನೆಸ್ ಕ್ಲಬ್‌ಗೆ ಮರಳಿದ ಕತ್ರೀನಾ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Katrina Kaif Instagram

ಬೆಂಗಳೂರು: ನಟಿ ಕತ್ರೀನಾ ಕೈಫ್ ಬಾಲಿವುಡ್‌ನ ಪ್ರಮುಖ ನಟಿಯರಲ್ಲಿ ಒಬ್ಬಳಾಗಿದ್ದಾರೆ. ಕತ್ರೀನಾ ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು.

ಈಗ ಕೋವಿಡ್‌ನಿಂದ ಚೇತರಿಸಿಕೊಂಡಿರುವ ನಟಿ ಕತ್ರೀನಾ, ಮತ್ತೆ ತಮ್ಮ ಫಿಟ್ನೆಸ್‌ನತ್ತ ಗಮನ ಹರಿಸುತ್ತಿದ್ದಾರೆ.

ಫಿಟ್ನೆಸ್ ವರ್ಕೌಟ್ ಕುರಿತು ಅಪಾರ ಕಾಳಜಿ ಹೊಂದಿರುವ ಕತ್ರೀನಾ, ತಮ್ಮ ಸಾಮಾಜಿಕ ತಾಣ ಖಾತೆಗಳಲ್ಲಿ ಜಿಮ್‌ನಲ್ಲಿ ಬೆವರಿಳಿಸುತ್ತಿರುವ ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಅಲ್ಲದೆ, ವಿವಿಧ ಫೋಟೊ ಪೋಸ್ಟ್ ಮಾಡಿ ಅಭಿಮಾನಿಗಳನ್ನು ಹುರಿದುಂಬಿಸುತ್ತಿರುತ್ತಾರೆ.

ಸೋಂಕಿಗೆ ತುತ್ತಾಗಿ ನಂತರ ಚೇತರಿಸಿಕೊಂಡು, ಮರಳಿದ್ದೇನೆ ಎಂಬ ಕತ್ರೀನಾ ಪೋಸ್ಟ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶುಭ ಹಾರೈಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಬಾಲಿವುಡ್ ಸಹಿತ ಚಿತ್ರರಂಗದಲ್ಲಿ ಹೊಸ ಚಿತ್ರಗಳು ಸೆಟ್ಟೇರುತ್ತಿಲ್ಲ. ಇದರಿಂದಾಗಿ ಬಾಲಿವುಡ್‌ನ ನಟ-ನಟಿಯರು ಸಾಮಾಜಿಕ ತಾಣಗಳಲ್ಲಿ ವಿವಿಧ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂವಹನ ನಡೆಸುತ್ತಿರುತ್ತಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು