ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರೀಯರಾಗಿರುತ್ತಾರೆ. ಆ ಮೂಲಕ ಅವರ ದೈನಂದಿನ ಚಟುವಟಿಕೆಗಳ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಈ ಬೆಡಗಿ. ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಧನ್ಯವಾದ ತಿಳಿಸಿದ್ದರು.

ಈಗ ಕತ್ರಿನಾ ಸಂಕಷ್ಟದಲ್ಲಿರುವ ಸಿನಿಮಾ ಹಿನ್ನೆಲೆ ನರ್ತಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೆಲ ದಿನಗಳ ಹಿಂದೆ ಕೋವಿಡ್ ಕಾರಣದಿಂದ ಕೆಲಸವಿಲ್ಲದೇ ಕಷ್ಟದಲ್ಲಿದ್ದ ಹಿನ್ನೆಲೆ ನರ್ತಕರಿಗೆ ನಟ ಹೃತಿಕ್ ರೋಷನ್ ಸಹಾಯ ಮಾಡಿದ್ದರು. ಅವರಿಂದ ಪ್ರೇರಣೆ ಪಡೆದ ಕತ್ರಿನಾ ತಾವು ಸಹಾಯಕ್ಕೆ ಮುಂದಾಗಿದ್ದಾರೆ.

ಅಗತ್ಯವಿರುವವರಿಗೆ ಸಹಾಯ ಮಾಡುವ ಮೂಲಕ ಸ್ಪಂದಿಸಿದಲ್ಲದೇ ಮಹಾರಾಷ್ಟ್ರದ ಮುಖ್ಯಮಂತ್ರಿ ನಿಧಿ ಹಾಗೂ ಪ್ರಧಾನಮಂತ್ರಿ ನಿಧಿಗೆ ಹಣ ಸಹಾಯ ಮಾಡಿದ್ದಾರೆ. ಅಲ್ಲದೇ ತಮ್ಮ ಅಭಿಮಾನಿಗಳಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಲಾಕ್ಡೌನ್ಗೂ ಮೊದಲು ಕರೀನಾ ತಮ್ಮ ಮುಂದಿನ ಚಿತ್ರ ‘ಸೂರ್ಯವಂಶಿ’ ಪ್ರಚಾರ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಈ ಸಿನಿಮಾವೂ ಮಾರ್ಚ್ 24 ರಂದು ಬಿಡುಗಡೆಯಾಗಬೇಕಿತ್ತು. ಕೊರೊನಾ ಸೋಂಕಿನ ಕಾರಣದಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು ಧರ್ಮಾ ಪ್ರೊಡಕ್ಷನ್, ರಿಲಯನ್ಸ್ ಎಂಟರ್ಟೈನ್ಮೆಂಟ್ ಹಾಗೂ ಕೇಪ್ ಆಫ್ ಗುಡ್ ಫಿಲ್ಮ್ಸ್ ಸಂಸ್ಥೆಗಳು ನಿರ್ಮಾಣದ ಹೊಣೆ ಹೊತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.