ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಸ್ವೀಟ್ ಹೋಮ್' ಎಂದು ಹೊಸ ಅಪಾರ್ಟ್‌ಮೆಂಟ್‌ಗೆ ಅಡಿಯಿಟ್ಟ ಕತ್ರಿನಾ– ವಿಕ್ಕಿ ದಂಪತಿ

Last Updated 4 ಜನವರಿ 2022, 10:39 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟಿ ಕತ್ರಿನಾಕೈಫ್‌ ಹಾಗೂ ವಿಕ್ಕಿ ಕೌಶಲ್ ದಂಪತಿ ಮುಂಬೈನ ಜುಹೂ ಬೀಚ್ ಬಳಿಯ ಹೊಸ ಅಪಾರ್ಟ್‌ಮೆಂಟ್‌ಗೆ ತೆರಳಿದ್ದಾರೆ.

ಗೃಹ ಪ್ರವೇಶ ಮಾಡಿರುವಖುಷಿಯಲ್ಲಿರುವ ಕತ್ರಿನಾ, ಸಂಭ್ರಮದ ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು,'ಹೋಮ್ ಸ್ವೀಟ್ ಹೋಮ್' ಎಂದು ಬರೆದುಕೊಂಡಿದ್ದಾರೆ. ಈ ಫೋಟೊಗಳನ್ನು ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಬಾಲಿವುಡ್ ತಾರಾ ಜೋಡಿಗಳಲ್ಲಿ ಅಭಿಮಾನಿಗಳ ನೆಚ್ಚಿನ ಜೋಡಿ ಎಂದರೆ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಎಂಬುದರಲ್ಲಿ ಎರಡು ಮಾತಿಲ್ಲ. ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ಹೊಸ ವರ್ಷಾಚರಣೆಯನ್ನು ಮುಂಬೈನಲ್ಲೇ ಆಚರಿಸಿದ್ದ ಈ ಜೋಡಿ. ಹೊಸ ಅಪಾರ್ಟ್‌ಮೆಂಟ್‌ ಪ್ರವೇಶಿಸುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ಮನೆಯನ್ನು ಗಿಡಗಳಿಂದ ಅಲಂಕರಿಸಲಾಗಿದೆ.

ಖ್ಯಾತ ನಿರ್ದೇಶಕ ಶ್ರೀರಾಮ್ ರಾಘವನ್ ಆಕ್ಷನ್ ಕಟ್ ಹೇಳುತ್ತಿರುವ ‘ಮೆರ್ರಿ ಕ್ರಿಸ್ಮಸ್’ ಚಿತ್ರದಲ್ಲಿ ಬ್ಯುಸಿ ಆಗಿರುವ ಕತ್ರಿನಾ, ವಿಜಯ್ ಸೇತುಪತಿಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ, ಕತ್ರಿನಾ ‘ಟೈಗರ್ 3’ ಚಿತ್ರದಲ್ಲಿ ಸಲ್ಮಾನ್ ಜತೆ ಬಣ್ಣಹಚ್ಚುತ್ತಿದ್ದಾರೆ.

ಇತ್ತ ವಿಕ್ಕಿ ಕೌಶಲ್, ‘ಸ್ಯಾಮ್ ಬಹದ್ದೂರ್’, ‘ಗೋವಿಂದ ನಾಮ್ ಮೇರಾ’ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ.

ನಟಿ ಅನುಷ್ಕಾ ಶರ್ಮಾ ಮತ್ತುಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದಾರೆ. ಇದರಹತ್ತಿರವೇ ಇರುವ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ ಅನ್ನು ಕತ್ರೀನಾ–ವಿಕ್ಕಿ ಜೋಡಿಖರೀದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT