ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಿಮಿಂಗ್‌ ಪೂಲ್‌ನಲ್ಲಿ ಈಜಾಟ: ಹೊಸ ಫೋಟೊ ಹಂಚಿಕೊಂಡ ಕತ್ರಿನಾ –ವಿಕ್ಕಿ ದಂಪತಿ

ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಕತ್ರಿನಾ ಕೈಫ್ –ವಿಕ್ಕಿ ಕೌಶಲ್‌ ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಈ ಜೋಡಿ, ಹಬ್ಬ, ಸಮಾರಂಭ, ಪ್ರವಾಸದ ವೇಳೆ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಸ್ವಿಮಿಂಗ್‌ ಪೂಲ್‌ನಲ್ಲಿ ಹಾಟ್‌ ಆಗಿ ಕಾಣಿಸಿಕೊಂಡಿರುವಕತ್ರಿನಾ, ಪತಿಯೊಂದಿಗೆಕ್ಯಾಮರಾಗೆ ಪೋಸ್‌ ನೀಡಿರುವ ಫೋಟೊವನ್ನು ಹೃದಯದ ಎಮೋಜಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಪೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಕತ್ರಿನಾ –ವಿಕ್ಕಿ ಸೌಂದರ್ಯವನ್ನು ಚಿತ್ರರಂಗದ ಗಣ್ಯರು ಸೇರಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಬಣ್ಣಿಸಿದ್ದಾರೆ.

2021ರ ಡಿ. 9ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ನಟ ವಿಕ್ಕಿ ಕೌಶಲ್‌ ಮತ್ತು ಕತ್ರಿನಾ ಕೈಫ್ ಅದ್ಧೂರಿಯಾಗಿ ವಿವಾಹವಾಗಿದ್ದರು.

ಫರ್ಹಾನ್ ಅಖ್ತರ್ ಆ್ಯಕ್ಷನ್ ಕಟ್‌ ಹೇಳುತ್ತಿರುವ ‘ಜೀ ಲೇ ಝರಾ’ ಚಿತ್ರದಲ್ಲಿ ಕತ್ರಿನಾ ಕೈಫ್ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ವಿಕ್ಕಿ ಕೌಶಲ್‌, ಸಾರಾ ಅಲಿ ಖಾನ್‌ ಅಭಿನಯಿಸುತ್ತಿದ್ದಾರೆ.

ಓದಿ...ನೀಲಿ ಬಿಕಿನಿಯಲ್ಲಿ ಕತ್ರಿನಾ: ನೆಟ್ಟಿಗರ ಎದೆಬಡಿತ ಹೆಚ್ಚಿಸಿದ ಬಾಲಿವುಡ್ ಬೆಡಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT