ಮಂಗಳವಾರ, ಜನವರಿ 25, 2022
28 °C

ನಟಿ ಕೀರ್ತಿ ಸುರೇಶ್‌ಗೆ ಕೋವಿಡ್‌ ದೃಢ: ಶೀಘ್ರ ಗುಣಮುಖರಾಗಿ ಎಂದ ಅಭಿಮಾನಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೆಲುಗು ಹಾಗೂ ತಮಿಳಿನ ಜನಪ್ರಿಯ ನಟಿ ಕೀರ್ತಿ ಸುರೇಶ್‌ಗೆ ಕೋವಿಡ್‌ ದೃಢಪಟ್ಟಿದ್ದು, ನನಗೆ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದಲ್ಲಿ ಕೊವಿಡ್ ತೀವ್ರ ಪ್ರಮಾಣದಲ್ಲಿ ಏರುತ್ತಿದ್ದು ಅಭಿಮಾನಿಗಳು ಸೋಂಕನ್ನು ನಿರ್ಲಕ್ಷ್ಯ ಮಾಡದೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಕರೆ ನೀಡಿದ್ದಾರೆ. 

ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ ನನಗೆ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳು ಇರುವುದರಿಂದ ಆದಷ್ಟು ಬೇಗ ಗುಣಮುಖಳಾಗಿ ಮತ್ತೆ ಕೆಲಸಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ. 

ಲಸಿಕೆ ಪಡೆಯದವರು ಆದಷ್ಟು ಶೀಘ್ರವಾಗಿ ಪಡೆದುಕೊಳ್ಳಿ. ಇದರಿಂದಾಗಿ ಸೋಂಕಿನ ಪರಿಣಾಮ ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ ಹಾಗೂ ತೀವ್ರತರ ಸೋಂಕಿನಿಂದ ಪಾರಾಗಬಹುದು ಎಂದು ಹೇಳಿದ್ದಾರೆ. 

ನಟಿಯ ಪೋಸ್ಟ್​ಗೆ ಅಭಿಮಾನಿಗಳು ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.

ಇತ್ತೀಚೆಗೆ ಕೀರ್ತಿ ಅವರು ರಜನಿಕಾಂತ್‌ ಅಭಿನಯದ ‘ಅಣ್ಣಾತೆ’, ಮೋಹನ್​ಲಾಲ್ ಅವರ ‘ಮರಕ್ಕರ್’ ಚಿತ್ರಗಳಲ್ಲಿ ನಟಿಸಿದ್ದರು.  ಸದ್ಯ ಅವರು 5 ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು