ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಟ್ಟೇರಲಿದೆ ‘ನಾಡಪ್ರಭು ಕೆಂಪೇಗೌಡ’ರ ಕಥೆ

Published 7 ಏಪ್ರಿಲ್ 2024, 23:30 IST
Last Updated 7 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಚಿತ್ರ ಸೆಟ್ಟೇರಲು ಸಜ್ಜಾಗಿದೆ. ಅಮೃತವರ್ಷಿಣಿ, ಇನ್ಸ್‌ಪೆಕ್ಟರ್‌ ವಿಕ್ರಂದಂತಹ ಸೂಪರ್‌ ಹಿಟ್‌ ಚಿತ್ರಗಳನ್ನು ನಿರ್ದೇಶಿಸಿದ್ದ ದಿನೇಶ್ ಬಾಬು ‘ಕೆಂಪೇಗೌಡರಿಗೆ’ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ಸಂಗೀತ ನಿರ್ದೇಶಕ ಕಿರಣ್ ತೋಟಂಬೈಲ್ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಧರ್ಮೇಂದ್ರ ಕುಮಾರ್ ಅರೇನಹಳ್ಳಿ ಕಥೆ ಬರೆದಿದ್ದು, ಸಂಕೇತ್ ಎಂವೈಎಸ್ ಛಾಯಾಚಿತ್ರಗ್ರಹಣವಿದೆ. ಉಜ್ವಲ್ ಕುಲಕರ್ಣಿ ಸಂಕಲನವಿದ್ದು, ನಿರ್ಮಾಪಕರದ್ದೇ ಸಂಗೀತವಿದೆ. 

‘ನಾನು ಕೆಂಪೇಗೌಡ ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿ. ಆಗಲೇ ಅವರ ಬಗ್ಗೆ ಸಿನಿಮಾ ಮಾಡಬೇಕೆಂಬ ಕನಸು ಕಂಡಿದ್ದೆ. ಜನಪ್ರಿಯ ನಟರೊಬ್ಬರು ಕೆಂಪೇಗೌಡರಾಗಿ ರಾರಾಜಿಸಲಿದ್ದಾರೆ. ಶೀಘ್ರದಲ್ಲಿಯೇ ಆ ಬಗ್ಗೆ ಮಾಹಿತಿ ನೀಡುತ್ತೇವೆ. ಮೇ ಅಥವಾ ಜೂನ್ ತಿಂಗಳಲ್ಲಿ‌ ಚಿತ್ರ ಸೆಟ್ಟೇರಲಿದೆ’ ಎನ್ನುತ್ತಾರೆ ನಿರ್ಮಾಪಕ.

ವಿ.ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ, ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಚಿತ್ರಕ್ಕದೆ. ಕನ್ನಡ ಹಾಗೂ‌‌‌ ಇಂಗ್ಲೀಷ್ ಭಾಷೆಯಲ್ಲಿ ಚಿತ್ರ‌ ನಿರ್ಮಾಣವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT