ಭಾನುವಾರ, ಜುಲೈ 3, 2022
27 °C

ಅತ್ಯಾಚಾರ ಪ್ರಕರಣ: ಮಲಯಾಳಂ ನಟ ವಿಜಯ್‌ ಬಾಬು ಪಾಸ್‌ಪೋರ್ಟ್‌ ರದ್ದತಿಗೆ ಚಿಂತನೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಕೊಚ್ಚಿ: ಅತ್ಯಾಚಾರದ ಆರೋಪ ಎದುರಿಸುತ್ತಿರುವ ಮಲಯಾಳಂನ ನಟ-ನಿರ್ಮಾಪಕ ವಿಜಯ್ ಬಾಬು ಅವರ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಲು ಕೇರಳ ಪೊಲೀಸರು ಚಿಂತನೆ ನಡೆಸಿದ್ದಾರೆ. 

ಲೈಂಗಿಕ ದೌರ್ಜನ್ಯ ಮತ್ತು ಫೇಸ್‌ಬುಕ್ ಲೈವ್ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯ್ ಬಾಬು ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ ಬಳಿಕ ತಲೆಮರೆಸಿಕೊಂಡಿದ್ದ ಬಾಬು, ಫೇಸ್‌ಬುಕ್ ಲೈವ್‌ನಲ್ಲಿ ಕಾಣಿಸಿಕೊಂಡು ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದರು. ಆ ನಂತರ ಮತ್ತೆ ತಲೆಮರೆಸಿಕೊಂಡಿರುವ ವಿಜಯ್‌ ಬಾಬು ಅವರ ಮೇಲೆ ಕೇರಳ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದರು. 

‘ಪ್ರಾಥಮಿಕವಾಗಿ ಆರೋಪ ಸಾಬೀತಾಗಿದ್ದು, ಆರೋಪಿ ದೇಶ ತೊರೆಯುವ ಸಾಧ್ಯತೆ ಇರುವುದರಿಂದ ಆತನ ವಿರುದ್ಧ ಲುಕ್‌ಔಟ್ ನೋಟಿಸ್‌ ಜಾರಿಗೊಳಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದರು. 

ಲುಕ್‌ಔಟ್‌ ನೋಟಿಸ್‌ ಜಾರಿ ನಂತರವೂ ಪೊಲೀಸರ ಕೈಗೆ ಸಿಗದ ವಿಜಯ್‌ ಬಾಬು ಸದ್ಯ ಯುಎಇಯಲ್ಲಿದ್ದಾರೆ ಎಂದು ಶಂಕಿಸಲಾಗಿದೆ. ಈತನನ್ನು ಬಂಧಿಸಲು ವಿದೇಶಕ್ಕೆ ತೆರಳುವ ಬಗ್ಗೆಯೂ ಕೇರಳ ಪೊಲೀಸರು ಚಿಂತನೆ ನಡೆಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು