ತಿರುವನಂತಪುರ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಎರಡನೇ ಎಫ್‌ಐಆರ್ ದಾಖಲಾಗಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ವರದಿ ಮಾಡಿದೆ.
ನಟಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಕೋಯಿಕ್ಕೋಡ್‌ನಲ್ಲಿ ರಂಜಿತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಯುವ ನಟನಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಅಡಿಯಲ್ಲಿ ರಂಜಿತ್ ವಿರುದ್ಧ ಮೊದಲ ಪ್ರಕರಣ ದಾಖಲಾಗಿತ್ತು.
ಸಿನಿಮಾ ರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಕುರಿತು ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಬಿಡುಗಡೆ ಮಾಡಿತ್ತು. ಇದು ಕೇರಳ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಈಗಾಗಲೇ ಹಲವು ನಟಿಯರು ತಮಗೆ ಎದುರಾದ ಅನ್ಯಾಯವನ್ನು ಬಹಿರಂಗಗೊಳಿಸಿದ್ದಾರೆ.