ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮಪ್ಪನ ಕಥೆ: ಜೈ ಕೇಸರಿ ನಂದನ

Last Updated 4 ಏಪ್ರಿಲ್ 2019, 19:30 IST
ಅಕ್ಷರ ಗಾತ್ರ

ಹನುಮಂತ ಹಾಲಿಗೇರಿ ಅವರ ‘ಊರು ಸುಟ್ಟರೂ ಹನುಮಪ್ಪ ಹೊರಗೆ’ ನಾಟಕ ಆಧರಿಸಿದ ಸಿನಿಮಾ ‘ಜೈ ಕೇಸರಿ ನಂದನ’. ಇದು ಏಪ್ರಿಲ್‌ 12ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಹಾಡುಗಳ ಬಿಡುಗಡೆ ಈಚೆಗೆ ನಡೆಯಿತು.

‘ಉತ್ತರ ಕರ್ನಾಟಕದ ಕಂಪ್ಲೀಟ್ ಪ್ಯಾಕೇಜ್ ಇರುವ ಸಿನಿಮಾ ಇದು’ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರವನ್ನು ಶ್ರೀಧರ್ ಜಾವೂರ್ ನಿರ್ದೇಶಿಸಿದ್ದಾರೆ.

ಈ ಸಿನಿಮಾದಲ್ಲಿ ಗುರುರಾಜ್ ಹೊಸಕೋಟೆ, ರಾಜು ತಾಳಿಕೋಟೆ, ಶಶಿಧರ್ ದಾನಿ, ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಲ್ಲೇಶ್ ವರ್ಧನ್, ಅಮೃತ ಈ ಚಿತ್ರದ ನಾಯಕ-ನಾಯಕಿಯರ ಪಾತ್ರ ನಿರ್ವಹಿಸಿದ್ದಾರೆ.

ಎರಡು ಗ್ರಾಮಗಳ ನಡುವಿನ ಜಗಳದಲ್ಲಿ ಪೊಲೀಸ್ ಠಾಣೆ ಸೇರಿಕೊಂಡ ಹನುಮಂತಪ್ಪನ ಕಥೆ ಇದು. ‘ಧರಗಟ್ಟಿ ಮತ್ತು ವಜ್ರಗಟ್ಟಿ ಎಂಬ ಎರಡು ಊರು ಸುಟ್ಟು, ಹನುಮಪ್ಪನ ಜಾತ್ರೆ ಸಮಯದಲ್ಲಿ ನಡೆದ ಘೋರ ದುರಂತವನ್ನು ಈ ಚಿತ್ರದಲ್ಲಿ ಹೇಳಿದ್ದೇವೆ’ ಎಂದು ಶ್ರೀಧರ್ ಜಾವೂರ್ ಹೇಳಿದರು.

ಶಶಿಧರ್ ದಾನಿ, ಪ್ರವೀಣ್ ಕತ್ರಿ, ನಾರಾಯಣ ಷಾ, ಪವಾರ್, ಲಕ್ಷ್ಮಣ್ ಸಿಂಗ್ರಿ ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

‘ಗಂಭೀರ ವಿಷಯವನ್ನು ನಾಜೂಕಾಗಿ ಹೇಳುವ ಪ್ರಯತ್ನ ಇಲ್ಲಿದೆ’ ಎಂದರು ನಾಯಕ ನಟ ಕಲ್ಲೇಶ್.

ನಾಯಕಿ ಅಮೃತ ಆರ್. ಅವರು ಉತ್ತರ ಕರ್ನಾಟಕದವರೇ ಆಗಿರುವ ಕಾರಣ, ಅವರಿಗೆ ಸಿನಿಮಾದಲ್ಲಿ ಸಂಭಾಷಣೆ ಕಷ್ಟಕೊಡಲಿಲ್ಲವಂತೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT