ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಟಿಟಿಯಲ್ಲಿ ಬಿಡುಗಡೆಯಾಯ್ತು ಕೆಜಿಎಫ್ ನಟಿಯ ಚಿತ್ರ ‘ಮ್ಯೂಟ್’

Last Updated 23 ಫೆಬ್ರವರಿ 2023, 9:53 IST
ಅಕ್ಷರ ಗಾತ್ರ

ಕೆಜಿಎಫ್‌ ಚಿತ್ರದಲ್ಲಿ ತಾಯಿ ಪಾತ್ರ ಮಾಡಿದ್ದ ಅರ್ಚನಾ ಜೋಯಿಸ್ ಮುಖ್ಯ ಭೂಮಿಕೆಯಲ್ಲಿರುವ ‘ಮ್ಯೂಟ್’ ಚಿತ್ರ ‘ನಮ್ಮಫ್ಲಿಕ್ಸ್’ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೊಂಡಿದೆ.

ಸದ್ಯ ಕನ್ನಡ ಭಾಷೆಯಲ್ಲಿ ಬಿಡುಗಡೆಗೊಂಡಿರುವ ಚಿತ್ರ ಶೀಘ್ರದಲ್ಲಿ ತೆಲುಗು, ಮಾಲಯಾಳ, ತಮಿಳು ಮತ್ತು ಹಿಂದಿ ಅವತರಣಿಕೆಗಳಲ್ಲಿಯೂ ಬರಲಿದೆ. ತಮಿಳಿನ ಜನಪ್ರಿಯ ನಟ ಆಡುಕಲಂ ನರೇನ್ ಕೂಡ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ, ತೇಜಸ್ ವೆಂಕಟೇಶ್ ಸಹ ಮುಖ್ಯ ಪಾತ್ರ ನಿರ್ವಹಿಸಿದ್ದಾರೆ. ಬಾಲಿವುಡ್ ಬೆಡಗಿ ರವೀನಾ ಟಂಡನ್ ಚಿತ್ರದ ಟ್ರೇಲರ್ ಅನ್ನು ಸಾಮಾಜಿಕ ತಾಣಗಳಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಿದ್ದರು.

ಇ.ಕೆ.ಪಿಕ್ಚರ್ಸ್ ಬ್ಯಾನರ್‌ನಲ್ಲಿ ಮುಂಗಾರು ಮಳೆ-2 ಖ್ಯಾತಿಯ ಜಿ.ಗಂಗಾಧರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿರ್ದೇಶಕ ಶಶಾಂಕ್ ಅವರೊಂದಿಗೆ ಮುಂಗಾರುಮಳೆ-2ರಲ್ಲಿ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿದೆ.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಚಿತ್ರ ರೋಚಕ ರಸದೌತಣ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ನಿರ್ದೇಶಕ ಪ್ರಶಾಂತ್ ಚಂದ್ರ ಹೇಳಿದ್ದಾರೆ.

ದಿವ್ಯಾ ಎನ್ನುವ ಸ್ವಾವಲಂಬಿ ಮಹಿಳೆ ತನ್ನ ಗಂಡನ ಮೋಸ ಗೊತ್ತಾದಾಗ ಕುಸಿದು ಹೋಗುತ್ತಾಳೆ. ಕಾಸ್ಮೋ ಎಂದು ಹೆಸರು ಇಟ್ಟು ಪ್ರೀತಿಯಿಂದ ಒಂದು ನಾಯಿಯನ್ನು ಸಾಕಿದ ಮೇಲೆ ಅವಳ ಜೀವನ ಬದಲಾಗುತ್ತದೆ. ಕಳೆದುಕೊಂಡ ಸಾಕು ನಾಯಿ ಹುಡುಕುವುದರ ಸುತ್ತ ಕಥೆ ಸಾಗುತ್ತದೆ ಎಂದು ಚಿತ್ರತಂಡ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT