ಸೋಮವಾರ, ಏಪ್ರಿಲ್ 6, 2020
19 °C

‘ಕೆಜಿಎಫ್‌ ಚಾಪ್ಟರ್‌ 2’ ರಿಲೀಸ್ ಡೇಟ್ ಫಿಕ್ಸ್: ಐದು ಭಾಷೆಗಳಲ್ಲಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿರ್ದೇಶಕ ಪ್ರಶಾಂತ್‌ ನೀಲ್‌ ಮತ್ತು ನಟ ಯಶ್‌ ನಾಯಕರಾಗಿರುವ ‘ಕೆಜಿಎಫ್‌ ಚಾಪ್ಟರ್‌ 2’ ಸಿನಿಮಾ ಅಕ್ಟೋಬರ್‌ 23ರಂದು ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳದಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ.

ಚಿತ್ರದ ಮೊದಲ ಅಧ್ಯಾಯ ಎಲ್ಲರಲ್ಲೂ ಕುತೂಹಲ ಮೂಡಿಸಿತ್ತು. ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಈ ಸಿನಿಮಾದ ಎರಡನೇ ಅಧ್ಯಾಯ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲ ಮೂಡಿತ್ತು. ದಿನಾಂಕವನ್ನು ಅಧಿಕೃತವಾಗಿ ಘೋಷಿಸುವ ಮೂಲಕ ಚಿತ್ರತಂಡ ಎಲ್ಲರ ಕುತೂಹಲವನ್ನು ತಣಿಸಿದೆ.

ಮೈಸೂರು, ಬೆಂಗಳೂರು, ಬಳ್ಳಾರಿ, ಹೈದರಾಬಾದ್‌ ಸೇರಿದಂತೆ ವಿವಿಧೆಡೆ ಚಾಪ್ಟರ್‌ 2ರ ಶೂಟಿಂಗ್‌ ಪೂರ್ಣಗೊಳಿಸಿರುವ ಚಿತ್ರತಂಡ ಪೊಸ್ಟ್‌ ಪ್ರೊಡಕ್ಷನ್‌ನಲ್ಲಿ ತೊಡಗಿದೆ. ಒಟ್ಟಾರೆ 100 ದಿನಗಳ ಕಾಲ ಶೂಟಿಂಗ್‌ ನಡೆಸಲಾಗಿದೆಯಂತೆ. ಶೀಘ್ರವೇ ಟೀಸರ್‌, ಟ್ರೇಲರ್ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಇದರಲ್ಲಿ‌ ಬಾಲಿವುಡ್‌ ನಟ ಸಂಜಯ್ ದತ್‌ ‘ಅಧೀರ’ನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಮಿಕಾ ಸೇನ್‌ ಪಾತ್ರದಲ್ಲಿ ರವೀನಾ ಟಂಡನ್‌ ಕಾಣಿಸಿಕೊಂಡಿದ್ದಾರೆ. ಶ್ರೀನಿಧಿ ಶೆಟ್ಟಿ ಅವರು ಯಶ್‌ಗೆ ಜೋಡಿಯಾಗಿದ್ದಾರೆ. ರವಿಬಸ್ರೂರ್‌ ಸಂಗೀತ ನೀಡಿದ್ದಾರೆ. ಕಾರ್ತಿಕ್‌ ಗೌಡ ಅವರ ಛಾಯಾಗ್ರಹಣವಿದೆ. ಹೊಂಬಾಳೆ ಫಿಲ್ಸ್ಮ್‌ನಡಿ ವಿಜಯ್‌ ಕಿರಗಂದೂರು ಬಂಡವಾಳ ಹೂಡಿದ್ದಾರೆ. 

‘ಕೆಜಿಎಫ್‌ ಸಾಮ್ರಾಜ್ಯದ ದ್ವಾರ ಅಕ್ಟೋಬರ್‌ 23ರಂದು ನಿಮ್ಮೆಲ್ಲರಿಗೂ ತೆರೆಯಲಿದೆ. ಅಂದು ಏಕಕಾಲಕ್ಕೆ ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ’ ಎಂದು ಯಶ್‌ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು