ಶನಿವಾರ, ಜನವರಿ 23, 2021
18 °C

ಕೆಜಿಎಫ್‌ ಚಾಪ್ಟರ್‌-2 ಟೀಸರ್‌: 48 ಗಂಟೆಗಳಲ್ಲಿ 10 ಕೋಟಿಗೂ ಅಧಿಕ ಜನರ ವೀಕ್ಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 48 ಗಂಟೆಗಳಲ್ಲಿ ಕೆಜಿಎಫ್‌ ಚಾಪ್ಟರ್‌-2 ಚಿತ್ರದ ಟೀಸರ್ ಅನ್ನು 10 ಕೋಟಿಗೂ(100 ಮಿಲಿಯನ್‌) ಅಧಿಕ ಜನರು ವೀಕ್ಷಿಸಿದ್ದಾರೆ.

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಕೆಜಿಎಫ್‌ ಚಿತ್ರದ ಈ ಟೀಸರ್ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದದ್ದು, ಈ ವರೆಗೂ 55 ಲಕ್ಷ ಮಂದಿ ಲೈಕ್‌ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, 'ಪ್ರತಿಯೊಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ. ತುಂಬು ಹೃದಯದ ಧನ್ಯವಾದಗಳು' ಎಂದು ತಿಳಿಸಿದ್ದಾರೆ.

ಚಿತ್ರದ ಯೂನಿವರ್ಸಲ್‌ ಟೀಸರ್‌ (ಎಲ್ಲ ಸಂದರ್ಭ, ಭಾಷೆ ಪ್ರದೇಶಗಳಿಗೆ ತಲುಪುವ ರೀತಿ) ಸಿದ್ಧಪಡಿಸಲಾಗಿದೆ. ‘ಕೆಜಿಎಫ್‌ ಚಾಪ್ಟರ್‌ 2’ನಲ್ಲಿ ಬಾಲಿವುಡ್‌ ನಟ ಸಂಜಯ್‌ ದತ್‌, ನಟಿ ರವೀನಾ ಟಂಡನ್ ಇದ್ದಾರೆ. ವಿಜಯ್‌ ಕಿರಗಂದೂರು ನಿರ್ಮಿಸಿರುವ ಈ ಚಿತ್ರವನ್ನು ಪ್ರಶಾಂತ್ ನೀಲ್‌ ನಿರ್ದೇಶಿಸಿದ್ದಾರೆ. ಚಿತ್ರ ಬಿಡುಗಡೆಯ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು