ಕೆಜಿಎಫ್ ಚಾಪ್ಟರ್ – 2 ಜ. 8ರಂದು ಟೀಸರ್ ಬಿಡುಗಡೆ

ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಕೆಜಿಎಫ್ ಚಾಪ್ಟರ್ 2 ಚಿತ್ರದ ಟೀಸರ್ ಜ. 8ರಂದು ಬೆಳಿಗ್ಗೆ 10.18ಕ್ಕೆ ಬಿಡುಗಡೆ ಆಗಲಿದೆ. ಚಿತ್ರದ ಯೂನಿವರ್ಸಲ್ ಟೀಸರ್ (ಎಲ್ಲ ಸಂದರ್ಭ, ಭಾಷೆ ಪ್ರದೇಶಗಳಿಗೆ ತಲುಪುವ ರೀತಿ) ಸಿದ್ಧಪಡಿಸಲಾಗಿದೆ. ಅಂದಹಾಗೆ ಜ. 8 ಚಿತ್ರದ ನಾಯಕ ನಟ ಯಶ್ ಅವರ ಜನ್ಮದಿನವೂ ಹೌದು.
ಕೆಜಿಎಫ್ ಚಾಪ್ಟರ್ 2ನಲ್ಲಿ ಬಾಲಿವುಡ್ ನಟ ಸಂಜಯ್ ದತ್, ರವೀನಾ ಟಂಡನ್ ಇದ್ದಾರೆ. ವಿಜಯ್ ಕಿರಗಂದೂರು ನಿರ್ಮಿಸುತ್ತಿರುವ ಈ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ. ಕೋವಿಡ್ ಕಾರಣಕ್ಕೆ ನಿಧಾನಗತಿಯಲ್ಲಿ ಸಾಗಿದ ಚಿತ್ರೀಕರಣ ಈಗ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದೆ. ಮಕರ ಸಂಕ್ರಾಂತಿ ಬಳಿಕ ಚಿತ್ರ ಬಿಡುಗಡೆ ಆಗುವ ನಿರೀಕ್ಷೆ ಇತ್ತು. ಬಿಡುಗಡೆಯ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.