ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KGF Chapter 2 Toofan: ‘ಜಿದ್ದಿ ಜಿದ್ದಿ ಹೈ ತೂಫಾನ್’ ಎಂದು ಅಬ್ಬರಿಸಿದ ಯಶ್

Last Updated 21 ಮಾರ್ಚ್ 2022, 7:03 IST
ಅಕ್ಷರ ಗಾತ್ರ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ’ತೂಫಾನ್‌’ ಲಿರಿಕಲ್ ಹಾಡುಸೋಮವಾರ ಲಹರಿ ಮ್ಯೂಸಿಕ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಿಯಾಳಂನಲ್ಲಿ ಜಿದ್ದಿ ಜಿದ್ದಿ ಹೈ ತೂಫಾನ್ ಹಾಡು ಬಿಡುಗಡೆಯಾಗಿದ್ದು, ಟ್ರೆಂಡಿಂಗ್ ನಂಬರ್ 1 ಆಗಿದೆ.

ರವಿ ಬಸ್ರೂರ್ ಸಂಗೀತ ನೀಡಿ ರಚಿಸಿರುವ ಈ ಹಾಡಿನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಇದೇ ವೇಳೆ ಕೆಜಿಎಫ್ ಚಾಫ್ಟರ್ 2 ಸಿನಿಮಾದ ಟ್ರೈಲರ್ ಮಾರ್ಚ್ 27 ರಂದು ಬೆಳಿಗ್ಗೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರ ಏಪ್ರಿಲ್ 14 ಕ್ಕೆ ಬಿಡುಗಡೆಯಾಗಲಿದ್ದು ಇದಕ್ಕಾಗಿ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ಹೇಳಿದೆ.

ಚಿತ್ರದಲ್ಲಿ ಸಂಜಯ್‌ ದತ್‌, ರವೀನಾ ಟಂಡನ್‌ ಸೇರಿದಂತೆ ಹಲವು ಪ್ರಮುಖ ನಟರು ಇದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಚಿತ್ರ ನಿರ್ಮಿಸುತ್ತಿದ್ದಾರೆ. ಈ ವರ್ಷ ಜನವರಿ 7ರಂದು ಚಿತ್ರದ ಯುನಿವರ್ಸಲ್‌ ಟೀಸರ್‌ ಬಿಡುಗಡೆ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT